ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್‌ಗೆ ೬,೭೮೩ ರೂ.ದಂತೆ ಪ್ರತಿ ಎಕರೆಗೆ ೩ ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ ಪ್ರಮಾಣ ೧೫ ಕ್ವಿಂಟಲ್ ಶೇಂಗಾ ಉತ್ಪನ್ನವನ್ನು ಖರೀದಿಸಲಾಗುತ್ತಿದೆ ಎಂದು ಜಿಲ್ಲಾಽಕಾರಿ, ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷೆ ಜಾನಕಿ ಕೆ.ಎಂ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರ, ಖರೀದಿಗೆ ನೋಂದಣಿ ಕಾರ್ಯ ಆದೇಶದ ದಿನಾಂಕ ಅ.೩೦ ಆರಂಭಗೊಂಡಿದ್ದು, ೪೫ ದಿನಗಳ ವರೆಗೆ ರೈತರ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಖರೀದಿ ಅವ ೯೦ ದಿನಗಳ ವರೆಗೆ, ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ೭ ಖರೀದಿ ಕೇಂದ್ರಗಳಲ್ಲಿ ರೈತರು ನೋಂದಣಿ ಮಾಡಿಕೊಳ್ಳಲು ಕೃಷಿ ಇಲಾಖೆಯಿಂದ ನೀಡಿರುವ ಎಫ್.ಐ.ಡಿ ನಂಬರ ಮತ್ತು ಆಧಾರ ಕಾರ್ಡ್ನ್ನು ನೀಡಿ ನೋಂದಾಯಿಸಿಕೊಳ್ಳತಕ್ಕದ್ದು. ಒಂದು ವೇಳೆ ಬೆಳೆ ದರ್ಶಕದಲ್ಲಿ ಮತ್ತು ಪ್ರೂಟ್ ತಂತ್ರಾಂಶದಲ್ಲಿ ಬೆಳೆ ಬೆಳೆಯುವುದು ಕಂಡು ಬರದೆ ಇದ್ದಲ್ಲಿ ಹತ್ತಿರದ ಕೃಷಿ ಇಲಾಖೆಗೆ ಆಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಂಡು ನಂತರ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ರೈತ ಬಾಂಧವರು ಖರೀದಿ ಕೇಂದ್ರಗಳಲ್ಲಿ ನೋಂದಾವಣಿ ಸಮಯದಲ್ಲಿ ಆಧಾರ ಕಾರ್ಡ್, ಪಹಣಿ ಪತ್ರಿಕೆ, ಆಧಾರ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸಬುಕ್ ಪ್ರತಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು ಕೆ.ಒಎಫ್ ಬಾಗಲಕೋಟೆ (ಮೊನಂ.೯೯೦೦೫೫೩೦೫೬) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.