ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಜನತೆ. 
ನ್ಯೂಸ್

ಬೆಲೆ ಏರಿಕೆ ನಡುವೆಯೂ ಪಟಾಕಿ ಖರೀದಿ

ಮೈಸೂರಿನಲ್ಲಿ ಬೆಲೆ ಏರಿಕೆ ನಡುವೆಯೂ ಪಟಾಕಿ ಖರೀದಿ ಜೋರಾಗಿ ನಡೆಯುತ್ತಿದೆ. ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶ, ಜೆಕೆ ಮೈದಾನ, ಇಟ್ಟಿಗೆಗೂಡು, ಸರಸ್ವತಿಪುರಂ, ಪಡುವಾರಹಳ್ಳಿ, ಚಾಮುಂಡಿಪುರಂ, ನಂಜುಮಳಿಗೆ, ರಾಮಕೃಷ್ಣನಗರ, ಕುವೆಂಪುನಗರ, ಅಕ್ಷಯಭಂಡಾರ, ಕುಂಬಾರಕೊಪ್ಪಲು ಸೇರಿದಂತೆ ನಗರದ ವಿವಿಧೆಡೆ ತೆರೆದಿರುವ ಮಳಿಗೆಗಳಲ್ಲಿ ಪಟಾಕಿಯ ವ್ಯಾಪಾರ ಭರ್ಜರಿಯಾಗಿ ನಡೆಯಿತು.

ಜಾಗೃತಿಯ ಫಲವಾಗಿ ಕಳೆದ ಕೆಲ ವರ್ಷಗಳಿಂದ ಜನರೇ ಹಸಿರು ಪಟಾಕಿಗಳನ್ನು ಮಾರುಕಟ್ಟೆಯಲ್ಲಿ ಕೇಳುತ್ತಿದ್ದಾರೆ. ಆಕಾಶಬುಟ್ಟಿ, ಕಲರ್‌ಫುಲ್, ಸೌಂಡ್‌ಲೆಸ್ ಪಟಾಕಿಗಳಿಗೆ ಬೇಡಿಕೆ ಬಂದಿದೆ. ಫ್ಲವರ್ ಪಾಟ್, ಕೃಷ್ಣಚಕ್ರ, ಸುರ್‌ಸುರ್ ಬತ್ತಿಯಂತಹ ಪಟಾಕಿಗಳನ್ನೇ ವಿಶೇಷವಾಗಿ ಗಿಫ್ಟ್ ಪ್ಯಾಕ್ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದಲ್ಲದೇ ಇತ್ತೀಚೆಗೆ ಆಕಾಶಬುಟ್ಟಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿಯೂ ಬಣ್ಣ ಬಣ್ಣದ ಆಕಾಶಬುಟ್ಟಿಗಳು ರಾರಾಜಿಸುತ್ತಿವೆ.