ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ, ಮೈಸೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಸಂಬoಧಿಸಿದoತೆ, ಮೈಸೂರು ತಾಲ್ಲೂಕು ಕೇಂದ್ರದಲ್ಲಿ ಜಲಸೇವಾ ನಿಯಂತ್ರಣ ಕೊಠಡಿ ತೆರೆದು, ಸಹಾಯವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ಪ್ರಚಾರ ಪಡಿಸಲು ಸೂಚಿಸಲಾಗಿದೆ.
ಅದರಂತೆ ಮೈಸೂರು ತಾಲ್ಲೂಕು ಪಂಚಾಯತ್ ಕಛೇರಿಯಲ್ಲಿ ಜಲಸೇವಾ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಸಹಾಯವಾಣಿಯ ಸ್ಥಿರ ದೂ.ಸಂ: 0821-2414433 ನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಪಂಚಾಯಿತಿಯ, ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.