ನ್ಯೂಸ್

ಬ್ಯಾಕಿಂಗ್ ಮತ್ತು ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರದ ಉದ್ಘಾಟನೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ದಿನಾಂಕ:29.10.2025ರ ಬೆಳಿಗ್ಗೆ 11:30 ಗಂಟೆಗೆ ಕಾವೇರಿ ಸಭಾಂಗಣದಲ್ಲಿ 50 ದಿನಗಳ ಬ್ಯಾಂಕಿoಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

 ತರಬೇತಿ ಶಿಬಿರದ ಉದ್ಘಾಟನೆಯನ್ನು ಹಿರಿಯ ನಿವೃತ್ತ ಐಪಿಎಸ್ ಅಧಿಕಾರಿ ನಿವೃತ್ತ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಶಂಕರ್ ಬಿದರಿ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಮೈಸೂರು ನಗರ ಪೊಲೀಸ್ ಉಪ ಆಯುಕ್ತೆ ಆರ್.ಎನ್. ಬಿಂದುಮಣಿ ಮುಖ್ಯ ಭಾಷಣ ಮಾಡುವರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಎಸ್.ಕೆ ನವೀನ್‌ಕುಮಾರ್ ಉಪಸ್ಥಿತರಿರುವರು.

 ಈಗಲೂ ತರಬೇತಿಗೆ ಪ್ರವೇಶಾತಿ ಪಡೆಯಲು ಅವಕಾಶವಿದ್ದು ಹೆಚ್ಚಿನ ವಿವರಗಳಿಗೆ 0821-2515944/9964760090 ಸಂಖ್ಯೆಯನ್ನು ಸಂಪರ್ಕಿಸಬಹುದೆoದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.