ಚಿತ್ರದುರ್ಗ:ಜಿಲ್ಲಾಡಳಿತದಿಂದ ಡಿಸಿ ಕಚೇರಿಯಲ್ಲಿ ಭಯೋತ್ಪದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಅಹಿಂಸೆ ಹಾಗೂ ಸಹ ನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆ ಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ದಾ ಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹ ಬಾಂಧವರಲ್ಲಿ ಶಾಂತಿ,ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ವೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದರು.