ನ್ಯೂಸ್

ಮಂಗಳೂರು ಅಂ.ರಾ.ವಿಮಾನ ನಿಲ್ದಾಣದಲ್ಲಿ 57ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ ಪತ್ತೆ

ಮಂಗಳೂರು: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 57 ಲಕ್ಷ ರೂ. ವೌಲ್ಯದ ಚಿನ್ನ ಮಂಗಳವಾರ ಪತ್ತೆಯಾಗಿದೆ.

ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳವಾರ ದುಬೈನಿಂದ ಸ್ಪೈಸ್‌ಜೆಟ್ ವಿಮನದಲ್ಲಿ ಆಗಮಿಸಿದ ಇಬ್ಬರು ಪ್ರಯಾಣಿಕರು 57 ಲಕ್ಷ ರೂ. ವೌಲ್ಯದ 1 ಕೆ.ಜಿ. 119 ಗ್ರಾಂ ತೂಕದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತಪಾಸಣೆ ವೇಳೆ ಪತ್ತೆಯಾಗಿದೆ.

ಚಿನ್ನವನ್ನು ಸ್ವಾಧೀನಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ.