ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ 44 ಲಕ್ಷ ರೂ.ಮೌಲ್ಯದ ಚಿನ್ನ ಸಾಗಾಟ ಪತ್ತೆ

ಮಂಗಳೂರು ಅಂ.ರಾ.ವಿಮಾನ ನಿಲ್ದಾಣದಲ್ಲಿ 44.2 ಲಕ್ಷ ರೂ. ಮೌಲ್ಯದ 800 ಗ್ರಾಂ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿ ಮಡಿಕೇರಿಯ ಉಬೈದ್ ಬಾಲಿಯತ್ ಎಂಬಾತನನ್ನು ಬಂಧಿಸಿದ್ದಾರೆ.
ದುಬಾಯಿಯಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ತಪಾಸಣೆ ನಡೆಸಿದಾಗ ದೇಹದ ಗುಪ್ತ ಭಾಗದಲ್ಲಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಇದು 24 ಕ್ಯಾರೆಟ್ ಪರಿಶುದ್ಧತೆಯನ್ನು ಹೊಂದಿದ ಚಿನ್ನವಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.