ಕಮಲಾಪುರ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಬ್ಯಾಗ್ ವಿತರಿಸಲಾಯಿತು. ಎಸ್.ಎಸ್.ಜಗದೀಶ್, ಕೆ.ವಿ.ಸುಬ್ರಹ್ಮಣ್ಯ, ಬಿ.ಸಿ.ಲೋಕೇಶ್, ಎನ್.ಪಿ.ರಮೇಶ್ ಇತರರಿದ್ದರು. 
ನ್ಯೂಸ್

ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ

ಎನ್.ಆರ್.ಪುರ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಹ್ಮಣ್ಯ ತಿಳಿಸಿದರು.

ನಾಗರಮಕ್ಕಿ ಹಾಗೂ ಕಮಲಾಪುರ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಶಾಲಾ ಬ್ಯಾಗ್, ಛತ್ರಿ ಇತರ ಶಾಲಾ ಪರಿಕರ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು ದಾನವಾಗಿ ನೀಡಿರುವ ಶಾಲಾ ಪರಿಕರಗಳನ್ನು ಸದ್ಭಳಕೆ ಮಾಡಿಕೊಂಡು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಿದರು.

ಶಿವಮೊಗ್ಗದ ಸರ್ಕಾರಿ ಶ್ರೀಗಂಧ ಕೋಠಿ ವಲಯ ಅರಣ್ಯಾಧಿಕಾರಿ ಬಿ.ಸಿ.ಲೋಕೇಶ್ ಮಾತನಾಡಿ, ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಶಾಲಾ ಪರಿಕರದ ದಾನಿ ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ಸುಬ್ರಹ್ಮಣ್ಯ ಹಾಗೂ ಶಿವಮೊಗ್ಗ ವಲಯ ಅರಣ್ಯಾಧಿಕಾರಿ ಬಿ.ಸಿ.ಲೋಕೇಶ್ ಅವರನ್ನು ಸನ್ಮಾನಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ತಾಲೂಕು ಅಧ್ಯಕ್ಷ ಎಸ್.ಎಸ್.ಜಗದೀಶ್, ಸೀತೂರು ಸಹಕಾರ ಸಂಘದ ನಿರ್ದೇಶಕ ಯಡಗೆರೆ ಸುಬ್ರಹ್ಮಣ್ಯ, ಗ್ರಾಪಂ ಸದಸ್ಯ ಎನ್.ಪಿ.ರಮೇಶ್, ಕೆ.ಆರ್.ನಾಗರಾಜ್ ಪುರಾಣಿಕ್, ವಿದ್ಯಾ ನಂದಕುಮಾರ್, ಗಿರೀಶ, ಲಕ್ಷ್ಮೀಶ, ರವಿ, ರೋಜಿ, ಎಸ್.ಮಹೇಶ್, ಜಯಾ, ರಾಜಶೇಖರ್ ಇದ್ದರು.