ವಿಜಯವಾಣಿ ಸುದ್ದಿಜಾಲ ಕೋಲಾರ
ಲೋಕಸಭಾ ಚುನಾವಣೆಗೆ ಈಗಾಗಲೇ ನಾನಾ ತಂಡಗಳನ್ನು ರಚಿಸಿ ಕಾರ್ಯೋನ್ಮುಖವಾಗಿದ್ದು, ಅದರಂತೆ ಮತಗಟ್ಟೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿ ನೀಡುವುದರ ಜೊತೆಗೆ ಮತಗಟ್ಟೆ ಕೇಂದ್ರಗಳ ವ್ಯವಸ್ಥೆ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ನಿರ್ದೇಶನ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳಿಗೆ ಏರ್ಪಡಿಸಿದ್ದ ಅಂತಿಮ ಹಂತದ ತರಬೇತಿ ಹಾಗೂ ಚುನಾವಣಾ ಪೂರ್ವ ದಿನದ ಸಿದ್ಧತೆಗಳ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸೆಕ್ಟರ್ ಅಧಿಕಾರಿಗಳು ೮ ರಿಂದ ೧೨ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಮೇಲುಸ್ತುವಾರಿ ನೋಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಫ್ಲೆöÊಯಿಂಗ್ ಸ್ಕಾ÷್ವಡ್, ಪೊಲೀಸ್ ಅಧಿಕಾರಿಗಳ ಜೊತೆಗೂಡಿ ಕಾರ್ಯ ನಿರ್ವಹಿಸಬೇಕು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಗೆ ಲೋಕಸಭಾ ಚುನಾವಣೆಯ ಸಿದ್ಧತೆ, ಮಸ್ಟರಿಂಗ್ ಹಾಗೂ ಮತಗಟ್ಟೆ ಕೇಂದ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು.
ಮಸ್ಟರಿಂಗ್ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವುದು, ವಿದ್ಯುನ್ಮಾನ ಮತಯಂತ್ರ, ಅಣಕು ಮತದಾನ, ಕಂಟ್ರೋಲ್ ಮತ್ತು ಬ್ಯಾಲೆಟ್ ಯೂನಿಟ್ ಅಳವಡಿಸುವುದು. ಮತಗಟ್ಟೆ ಕೇಂದ್ರದಲ್ಲಿ ಮತದಾನದಂದು ಪೂರ್ವಸಿದ್ಧತೆ ಮಾಡಿಕೊಳ್ಳುವುದು ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸೆಕ್ಟರ್ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಅವರು ಮಾತನಾಡಿ, ನಿರ್ಭೀತಿಯಿಂದ ಮತದಾನ ಮಾಡಲು ಕೋಲಾರ ಜಿಲ್ಲೆಯ ಪೊಲೀಸ್ ಎಲ್ಲಾ ಅಂತಗಳಲ್ಲಿಯೂ ಸಹಕಾರ ನೀಡುತ್ತದೆ. ಯಾವುದೇ ಸಂದರ್ಭಗಳಲ್ಲಿ ಅಹಿತಕರ ಘಟನೆ ನಡೆಯುವ ಅಥವಾ ಅಂತಹ ಸಂಭವಗಳಿದ್ದಲ್ಲಿ, ಸೆಕ್ಟರ್ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಸಂಪರ್ಕಿಸಿ ಸೂಕ್ತ ಭದ್ರತೆಯನ್ನು ಪಡೆಯಬಹುದಾಗಿರುತ್ತದೆ. ಪ್ರಸ್ತುತ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆ ನಡೆಸಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ನಿರೀಕ್ಷೆಯನ್ನು ತಲುಪಬೇಕು. ಆ ಮೂಲಕ ಕೋಲಾರ ಜಿಲ್ಲೆಯನ್ನು ಇತರೆ ಜಿಲ್ಲೆಗಳಿಗಿಂತ ಅಗ್ರಪಂಕ್ತಿಯಲ್ಲಿಯಿರಿಸಲು ತಮ್ಮೆಲ್ಲ ಸಹಕಾರ ಕೋರಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳಿAದ ನಿರೀಕ್ಷೆ ಮಾಡಬಹುದಾದ ವಿಷಯಗಳ ಸಮಗ್ರ ಮಾಹಿತಿ ಉಳ್ಳ ವಿಡಿಯೋವನ್ನು ಹಾಗೂ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಸಾರ್ವಜನಿಕರಿಗೆ ಮತದಾನ ಮಾಡಲು ಪ್ರೆರೇಪಿಸುವ ಸ್ವೀಪ್ ವಿಡಿಯೋವನ್ನು ಮಾನ್ಯ ಜಿಲ್ಲಾಧಿಕಾರಿಗಳು ಅನಾವರಣ ಮಾಡಿದರು.
ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ್ ವಣಿಕ್ಯಾಳ್ ಅವರು ಮಾಹಿತಿ ನೀಡಿ, ಸೆಕ್ಟರ್ ಅಧಿಕಾರಿಗಳು ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ನೀಡಲಾಗಿರುವ ಪುಸ್ತಕ ಕೈಪಿಡಿಯನ್ನು ಸಮರ್ಪಕವಾಗಿ ಅಭ್ಯಾಸ ಮಾಡಬೇಕು. ಪೋಲಿಂಗ್ ಪರಿಕರಗಳನ್ನು ಸರಿಯಾಗಿ ಪರಿಶೀಲಿಸಿ ಮತಗಟ್ಟೆ ಅಧಿಕಾರಿಗಳಿಗೆ ಕೊಡಿಸಬೇಕು. ಒಂದು ವೇಳೆ ಯಾವುದಾದರೂ ದಾಖಲೆ ಅಥವಾ ಪರಿಕರ ಇಲ್ಲದಿದ್ದರೆ ಗೊಂದಲಕ್ಕೊಳಗಾಗದೆ ಪ್ರತಿಯೊಂದು ಪರಿಕರಗಳನ್ನು ಕೊಡಿಸಬೇಕು ಎಂದರು. ಪ್ರತಿಯೊಂದು ಲಕೋಟಯನ್ನು ಪ್ರದರ್ಶಿಸಿ ಸವಿವರವಾಗಿ ಅವುಗಳನ್ನು ತುಂಬುವ ಬಗ್ಗೆ ಹಾಗೂ ಈವಿಎಂ, ವಿವಿಪ್ಯಾಟ್ ಗಳ ಬಳಕೆ ಕುರಿತು ಎಳೆ ಎಳೆಯಾಗಿ ವಿವರಿಸಿದರು.
ಸಮಯ ಪಾಲನೆ, ಕರ್ತವ್ಯ ಪ್ರಜ್ಞೆ, ಕರ್ತವ್ಯ ನಿಷ್ಠೆಯಿಂದ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚುನಾವಣಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮಸ್ಟರಿಂಗ್ ಕಾರ್ಯವು ಏಪ್ರಿಲ್ ೨೫ ರಂದು ಆಯಾ ತಾಲ್ಲೂಕಿನ ಕೇಂದ್ರಗಳಲ್ಲಿ ನಡೆಯಲಿದೆ. ಅಂದು ನಿಗದಿತ ಸಮಯಕ್ಕೆ ಮುಂಚಿತವಾಗಿ ಹಾಜರಾಗಿ ಮತಗಟ್ಟೆ ಸಂಬAಧಿಸಿದ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪರಸ್ಪರ ಪರಿಚಯ ಮಾಡಿಕೊಂಡು ವ್ಯವಸ್ಥಿತ ಮಸ್ಟರಿಂಗ್ ಕಾರ್ಯಕ್ಕೆ ಅನುವು ಮಾಡಿಕೊಳ್ಳಬೇಕು. ನಿಗಧಿತ ನಮೂನೆಗಳನ್ನು ಸರಿಯಾಗಿ ತುಂಬಿ ಆಯಾ ಲಕೋಟೆಗಳಲ್ಲಿ ವರದಿಗಳನ್ನು ಪಡೆಯಬೇಕು ಎಂದು ಅವರು ಹೇಳಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪದ್ಮ ಬಸವಂತಪ್ಪ, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ಎಲ್ಲಾ ತಹಶೀಲ್ದಾರ್‌ಗಳು, ಎಲ್ಲಾ ನೋಡಲ್ ಅಧಿಕಾರಿಗಳು, ಎಲ್ಲಾ ಸೆಕ್ಟರ್ ಅಧಿಕಾರಿಗಳು, ಚುನಾವಣೆ ಕರ್ತವ್ಯನಿರತ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ ೨೨ ಕೆ.ಎಲ್.ಆರ್. ೧೧ : ಚುನಾವಣೆಯ ನೋಡಲ್ ಅಧಿಕಾರಿಗಳಿಗೆ ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಮಾಹಿತಿ ನೀಡಿದರು.