ವಿಜಯವಾಣಿ ಸುದ್ದಿಜಾಲ ಕೋಲಾರ
ಲೋಕಸಭಾ ಚುನಾವಣೆಯ ಮತದಾನಕ್ಕೆ ಕೇವಲ ಇನ್ನು ೧೦ ದಿನಗಳು ಮಾತ್ರ ಬಾಕಿ ಇದೆ. ಏ.೨೬ಕ್ಕೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆರೋಪ ಪ್ರತ್ಯಾರೋಪಗಳ ಅಸ್ತçಗಳನ್ನು ಬಳಸಿಕೊಂಡು ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.
ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕೋಲಾರ ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳು ಚಿಕ್ಕಬಳ್ಳಾಪುರ ಜಿಲ್ಲೆಯ ೨ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು ೮ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತಿವೆ. ಚುನಾವಣಾ ಕಣದಲ್ಲಿ ರಾಷ್ಟಿçÃಯ ಪಕ್ಷಗಳಾದ ಕಾಂಗ್ರೇಸ್, ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಬಿಎಸ್‌ವೈ ಸೇರಿದಂತೆ ೧೮ ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಬಿಜೆಪಿ-ಜೆಡಿಎಸ್ ಎನ್‌ಡಿಎ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಹಾಗೂ ಕಾಂಗ್ರೇಸ್‌ನ ಕೆ.ವಿ.ಗೌತಮ್ ಈ ಇಬ್ಬರು ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡು ಕ್ಷೇತ್ರದಲ್ಲಿ ಅಬ್ಬರಿಸತೊಡಗಿದ್ದಾರೆ. ಇವರ ಪರವಾಗಿ ಜಿಲ್ಲಾ ಮತ್ತು ರಾಜ್ಯ ನಾಯಕರು ಆಗಮಿಸಿ ಪ್ರಚಾರಗಳನ್ನು ನಡೆಸಿದ್ದಾರೆ.
ಕಾಂಗ್ರೇಸ್ ಮತ್ತು ಜೆಡಿಎಸ್ ಹಾಗೂ ಬಿಜೆಪಿ ನಡುವೆ ಆಯಾ ಪಕ್ಷಗಳ ನಾಯಕರು ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡತೊಡಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾಂಗ್ರೇಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಕಾಂಗ್ರೇಸ್ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಪಪ್ರಚಾರ ಮಾಡುತ್ತಾ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.
ಸುಡು ಬಿಸಿಲನ್ನು ಲೆಕ್ಕಿಸದೆ ಆಯಾ ತಾಲ್ಲೂಕು ಮಟ್ಟಗಳಲ್ಲಿ ಹೋಬಳಿ ಮಟ್ಟ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಅಭ್ಯರ್ಥಿಗಳು ರೋಡ್‌ಶೋಗಳನ್ನು ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ದೇಶ, ನರೇಂದ್ರ ಮೋದಿ, ದೇವೇಗೌಡರನ್ನು ಮುಂದಿಟ್ಟುಕೊAಡು ಎನ್‌ಡಿಎ ಅಭ್ಯರ್ಥಿ ಮತ್ತು ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ.
ಕಾಂಗ್ರೇಸ್ ಏಕಾಂಗಿಯಾಗಿ ಬಿಜೆಪಿ ಜೆಡಿಎಸ್ ಸಾಧನೆಗಳು ಶೂನ್ಯ ಹಿಂದುತ್ವ ಬಿಟ್ಟರೆ ಮತ ಕೇಳುವ ನೈತಿಕತೆ ಉಳಿಸಿಕೊಂಡಿಲ್ಲ. ಕಳೆದ ೧೦ ವರ್ಷಗಳಿಂದ ಕೇಂದ್ರಗಳಲ್ಲಿ ನಡೆದಂತೆ ನಡೆದಿಲ್ಲ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆದಂತೆ ನುಡಿಯಲಾಗಿದೆ. ಕೊಟ್ಟ ಭರವಸೆಗಳನ್ನು ಈಡೇರಿಸಿ, ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂಬ ಅಸ್ತçವನ್ನು ಮುಂದಿಟ್ಟುಕೊAಡು ಪ್ರಚಾರದಲ್ಲಿ ತೊಡಗಿದ್ದಾರೆ.
ಜೆಡಿಎಸ್-ಬಿಜೆಪಿ ಮೈತ್ರಿ ಸದ್ಯಕ್ಕೆ ಚುನಾವಣೆ ಸಮಯಕ್ಕೆ ಹೊಂದಾಣಿಕೆಯಾಗಿದ್ದು, ತಳಮಟ್ಟದಿಂದ ಹೊಂದಾಣಿಕೆ ಇನ್ನೂ ಆಗಿಲ್ಲ. ಆದರೂ ಸಹ ಚುನಾವಣೆಗೆ ತಕ್ಕ ಹಾಗೆ ಹೊಂದಾಣಿಕೆಯನ್ನು ಮಾಡಿಕೊಂಡು ಮತಯಾಚನೆಯಲ್ಲಿ ತೊಡಗಿದ್ದಾರೆ. ಸಂಸದ ಮುನಿಸ್ವಾಮಿ ಎಂ.ಎಲ್.ಸಿ.ವೈ.ಎ ನಾರಾಯಣಸ್ವಾಮಿ ಹಾಗೂ ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಪರಾಭವಗೊಂಡಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕರಾದ ವೈ.ಸಂಪAಗಿ, ಬಿ.ಪಿ.ವೆಂಕಟಮುನಿಯಪ್ಪ, ಮಂಜುನಾಥಗೌಡ ಇವರುಗಳು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಜೆಡಿಎಸ್ ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಚಿಂತಾಮಣಿಯ ಮಾಜಿ ಶಾಸಕ ಜಿ.ಕೆ.ಕೃಷ್ಣಾರೆಡ್ಡಿ, ಎನ್.ಡಿ.ಎ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.
ಕಾಂಗ್ರೇಸ್ ಪಕ್ಷದಲ್ಲಿ ಇದ್ದ ಭಿನ್ನಮತ ಮೇಲ್ನೋಟಕ್ಕೆ ಶಮನ ಎಂದು ಹೇಳುತ್ತಿದ್ದರು, ಚುನಾವಣಾ ಪ್ರಚಾರಕ್ಕೆ ಕೆ.ಹೆಚ್.ಮುನಿಯಪ್ಪ ಬಾರದೆ ಇರುವುದರಿಂದ ಅವರ ಬೆಂಬಲಿಗರು ಹೆಚ್ಚಾಗಿ ಪ್ರಚಾರ ಸಭೆಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ. ಆದರೆ ಕಳೆದ ವಿಛಾನಸಭಾ ಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡ ಮುಖಂಡರು ಮತ್ತು ಆಯಾ ಕ್ಷೇತ್ರದ ಕಾರ್ಯಕರ್ತರು ಕಾಂಗ್ರೇಸ್ ಪ್ರಚಾರ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ ಸೋಲಿನ ನಂತರ ಕಾರ್ಯಕರ್ತರಿಂದ ದೂರವಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಆರೋಗ್ಯದ ಸಮಸ್ಯೆಯಿಂದ ಕ್ಷೇತ್ರ ಬಿಟ್ಟು ಉಳಿದ ಕಡೆ ಹೋಗುತ್ತಿಲ್ಲ. ಸಚಿವರಾದ ಬೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಕೊತ್ತೂರು ಮಂಜುನಾಥ್, ಎಂ.ಎಲ್.ಸಿ. ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್.ಸುಧರ್ಶನ್, ಮುಳಬಾಗಿಲು ಮತ್ತು ಶಿಡ್ಲಘಟ್ಟ ಪರಾಭವಿತ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ.
ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಇದೇ ರೀತಿ ಭಿನ್ನಮತ ಮುಂದುವರೆದಿತ್ತಾದರೂ ಕೆ.ಹೆಚ್.ಮುನಿಯಪ್ಪ ಮತ್ತು ಅವರ ಬೆಂಬಲಿಗರು ಹೆಚ್ಚಾಗಿ ಪ್ರಚಾರ ಸಭೆಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಕೆ.ಜಿ.ಎಫ್. ಕ್ಷೇತ್ರ ಹೊರತುಪಡಿಸಿದರೆ ಬೇರೆ ಕ್ಷೇತ್ರಗಳಿಗೆ ಕೆ.ಹೆಚ್.ಮುನಿಯಪ್ಪ ಪ್ರಚಾರಕ್ಕೆ ಬರಲಿಲ್ಲ. ದೇವನಹಳ್ಳಿ ಕ್ಷೇತ್ರದಲ್ಲಿ ಮುನಿಯಪ್ಪ ಸ್ಪರ್ಧೆ ಮಾಡಿದ್ದ ಕಾರಣ ಹೆಚ್ಚು ದೇವನಹಳ್ಳಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಅವರ ಬೆಂಗಲಿಗರು ಸಹ ದೇವನಹಳ್ಳಿ ಕ್ಷೇತ್ರದಲ್ಲಿ ಮುನಿಯಪ್ಪ ಗೆಲುವಿಗಾಗಿ ಶ್ರಮಿಸಿದ್ದರು.
ಮತದಾನಕ್ಕೆ ಇನ್ನು ಕೇವಲ ೧೦ ದಿನಗಳು ಮಾತ್ರ ಬಾಕಿ ಇದ್ದು, ಇನ್ನು ೨ ಪಕ್ಷಗಳಿಂದ ರಾಷ್ಟç ನಾಯಕರು ಆಗಮಿಸುವ ಸೂಚನೆಗಳಿವೆ. ಕಾಂಗ್ರೇಸ್ ಅಭ್ಯರ್ಥಿ ಗೌತಮ್ ಪರವಾಗಿ ರಾಹುಲ್‌ಗಾಂಧಿ, ಎನ್.ಡಿ.ಎ. ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಆಗಮಿಸುವ ಸೂಚನೆಗಳಿವೆ. ಸುಡು ಬಿಸಿಲಿನ ನಡುವೆಯೂ ಕಾರ್ಯಕರ್ತರ ಸಭೆಗಳು, ಪ್ರಚಾರಗಳು, ರೋಡ್‌ಶೋಗಳು ಭರ್ಜರಿಯಾಗಿ ನಡೆಯುತ್ತಿವೆ.
ಬಾಕ್ಸ್
ಕೋಲಾರ ಮೀಸಲು ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ : ೧೭,೦೮,೫೬೫ ಇದರಲ್ಲಿ ಪುರುಷ ಮತದಾರರು ೮,೪೫,೬೩೬ ಮಹಿಳಾ ಮತದಾರರು ೮,೬೨,೭೧೬ ಇತರೆ ೨೧೩ ಆಗಿದೆ.