ನ್ಯೂಸ್

ಮಹತ್ವದ ಸಭೆ ಕರೆದ ಸಿಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಕರೊನಾ ಪ್ರಕರಣ ನಿಯಂತ್ರಿಸಲು ಸರ್ಕಾರ ಅನೇಕ ಕ್ರಮಕೈಗೊಂಡರೂ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಹತ್ವದ ಸಭೆ ಕರೆದಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಲಿದ್ದು, ಕರೊನಾ ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವರು.
ಜತೆಗೆ ಹೆಚ್ಚು ಪ್ರಕರಣ ಬರುತ್ತಿರುವ ಕಡೆ ಅನುಸರಿಸಬೇಕಾದ ಹಾಗೂ ಸಾವಿನ ಸಂಖ್ಯೆ ನಿಯಂತ್ರಿಸಲು ಆಗಬೇಕಾದ ತುರ್ತು ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.