ನ್ಯೂಸ್

ಮಹಾರಾಜ ಮತ್ತು ಯುವರಾಜ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಅವಧಿ ವಿಸ್ತರಣೆ

 ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ಮಹಾರಾಜ ಮತ್ತು ಯುವರಾಜ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ 05 ವರ್ಷಗಳ ಅವಧಿಗೆ ನೇಮಕಾತಿ ಮಾಡುವ ಸಂಬoಧ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಅವಧಿಯನ್ನು ಜುಲೈ 31 ರ ವರೆಗೆ ವಿಸ್ತರಿಸಲಾಗಿದೆ.

 ಇದರ ಸಂಪೂರ್ಣ ವಿವರವು ಮೈಸೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.uni-mysore.ac.in ನಲ್ಲಿ ಲಭ್ಯವಿರುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ವಿವರಗಳನ್ನು ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ನಿಂದ ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.