ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದೆ ಜಿಲ್ಲಾ ಯಾದವ ಸಮಾಜದ ಅಧ್ಯಕ್ಷ ಮೀಸೆ ಮಹಾಲಿಂಗಪ್ಪರ ಹೇಳಿಕೆಯನ್ನು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ಖಂಡಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಸಿದ್ದರಾಮಯ್ಯರ ಅವಧಿ ಯಾದವ ಸಮುದಾಯದ ಅನೇಕರನ್ನು ಸಿಂಡಿಕೇಟ್ ಸದಸ್ಯರ ನೇಮಕವಾಗಿತ್ತು. ವಿವಿಧ ವಿಶ್ವವಿದ್ಯಾನಿಲಯಗಳಿಗೆ ಕುಲಸಚಿವರನ್ನಾಗಿ ಹಾಗೂ ಜಯಮ್ಮ ಬಾಲರಾಜ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಲಾಗಿತ್ತು. ರಾಜ್ಯದಲ್ಲಿರುವ ಅನೇಕ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿರುವ ಕೀರ್ತಿ ಕಾಂಗ್ರೆಸ್ಸಿಗೆ ಸಲ್ಲುತ್ತದೆ. ಮೊದಲಿಂದಲೂ ನಮ್ಮ ಸಮುದಾಯ ಕಾಂಗ್ರೆಸ್ಸನ್ನು ಬೆಂಬಲಿಸಿಕೊಂಡು ಬಂದಿದೆ ಎಂದರು. ಮಹಾಲಿಂಗಪ್ಪ ಅವರ ಹೇಳಿಕೆ ವೈಯಕ್ತಿಕ ವಿಚಾರಕ್ಕೆ ಬಿಟ್ಟಿದ್ದು,ಸಮುದಾಯಕ್ಕೆ ಸಂಬಂಧಿಸಿದ್ದಲ್ಲವೆಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್,ಡಿ.ಟಿ.ವೆಂಕಟೇಶ್,ಅಜ್ಜಪ್ಪ, ಸಂಪತ್‌ಕುಮಾರ್,ಮನೋಹರ್,ಎನ್.ಡಿ.ಕುಮಾರ್,ಮಧುಗೌಡ, ಮಂಜುನಾಥ್,ಮಹಡಿ ಶಿವಮೂರ್ತಿ ಇದ್ದರು.