ನ್ಯೂಸ್

ಮಾಲೂರು ತಾಲ್ಲೂಕಿನ ಶಿವಾರಪಟ್ಟಣದ ಬಳಿ ೧೫೦೦ ಎಕೆರೆ ಪ್ರದೇಶದಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಶಾಸಕ ನಂಜೇಗೌಡ

ವಿಜಯವಾಣಿ ಸುದ್ದಿಜಾಲ ಕೋಲಾರ

ಮಾಲೂರು ತಾಲ್ಲೂಕು ಶಿವಾರಪಟ್ಟಣ ಗ್ರಾಮದ ಬಳಿ ಈಗಾಗಲೇ ಕೈಗಾರಿಕಾ ಪ್ರಾಂಗಣ ಪ್ರದೇಶಾಭಿವೃದ್ಧಿ ಮಂಗಳಿಯವರು ಸ್ವಾಧೀನಪಡಿಸಿಕೊಂಡಿರುವ ೧೫೦೦ ಎಕೆರೆ ಭೂಮಿಯಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕನ್ನು ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಬುಧವಾರ ಮಾಲೂರು ಶಾಸಕ ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಕೋಲಾರದವರೇ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮನವಿ ಮಾಡಿದರು.

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಬಳಿ ಸ್ಥಾಪನೆ ಮಾಡಬೇಕಾಗಿದ್ದ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಜಮೀನು ಸ್ವಾಧೀನ ಮಾಡಿಕೊಳ್ಳಲು ರೈತರು ವಿರೋಧ ವ್ಯಕ್ತಪಡಿಸಿದ ಕಾರಣ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲಾಯಿತು.

ಸದರಿ ಕಂಪನಿ ಆಂಧ್ರಪ್ರದೇಶಕ್ಕೆ ವಾಪಸ್ಸು ಹೋಗುತ್ತದೆಂದು ತಿಳಿದು ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ನೀಡಿ, ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರಪಟ್ಟಣ ಗ್ರಾಮದ ಬಳಿ ೧೫೦೦ ಎಕೆರೆ ಭೂಮಿಯನ್ನು ಕೈಗಾರಿಕಾ ಪ್ರಾಂಗಣ ಪ್ರದೇಶಾಭಿವೃದ್ಧಿ ಮಂಡಳಿಯವರು ಸ್ವಾಧೀನಪಡಿಸಿಕೊಂಡಿದ್ದಾರೆ. ಸದರಿ ಜಾಗದಲ್ಲಿ ಈ ಕಂಪನಿಯನ್ನು ಪ್ರಾರಂಭಿಸಿದರೆ ಕೋಲಾರ ಜಿಲ್ಲೆಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶಗಳು ಸಿಗುತ್ತವೆ ಎಂದು ಮನವಿ ಮಾಡಿದರು.

ಶಾಸಕ ಕೆ.ವೈ.ನಂಜೇಗೌಡರ ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅಸ್ತು ಎಂದಿದ್ದು, ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು ಎನ್ನಲಾಗಿದೆ. ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಯಾಗುವುದರಿಂದ ದೇವನಹಳ್ಳಿ ವೇಮಗಲ್ ಮಾರ್ಗವಾಗಿ ನರಸಾಪುರ ಮತ್ತು ಮಾಲೂರು ಕೈಗಾರಿಕಾ ಪ್ರಾಂಗಣಗಳ ಮಧ್ಯೆ ತಮಿಳುನಾಡಿನ ಕೈಗಾರಿಕಾ ಪ್ರಾಂಗಣಗಳಿಗೆ ಹೊಸೂರು ಮೂಲಕ ರಸ್ತೆ ನಿರ್ಮಾಣ ಆಗುತ್ತಿರುವುದರಿಂದ ಅಂತರ್‌ರಾಜ್ಯ ಮಾರ್ಗ ವಿಸ್ತಾರಗೊಳ್ಳುತ್ತದೆ.

ಈಗಾಗಲೇ ಶಿವಾರಪಟ್ಟಣದಲ್ಲಿ ಕೈಗಾರಿಕಾ ಪ್ರಾಂಗಣದವರು ವಶಪಡಿಸಿಕೊಂಡಿರುವ ೧೫೦೦ ಎಕೆರೆ ಜಾಗದ ಪಕ್ಕದಲ್ಲಿಯೇ ಬೆಂಗಳೂರು ಚೆನ್ನೆöÊ ಕಾರಿಡಾರ್ ರಸ್ತೆ ಮತ್ತು ರಾಷ್ಟಿçÃಯ ಹೆದ್ದಾರಿ ೯೫ ಆಗುತ್ತಿರುವುದರಿಂದ ಹಾಗೂ ಬೆಂಗಳೂರು ಮತ್ತು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಹತ್ತಿರವಿರುವುದರಿಂದ ಮಾಲೂರು ನಗರ ಅತಿವೇಗವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಶಾಸಕರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಚಿತ್ರ ೨೩ ಕೆ.ಎಲ್.ಆರ್. ೦೨ : ಮಾಲೂರು ತಾಲ್ಲೂಕು ಶಿವಾರಪಟ್ಟಣದ ಬಳಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತಿರುವುದು. ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇದ್ದರು.