ನ್ಯೂಸ್

ಮಿಲಿಟರಿ ಬಾಲಕರ ವಸತಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು, ಇವರ ಅದೀನದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ 6ನೇ ತರಗತಿಯಿಂದ ಪಿ.ಯು.ಸಿ ಮತ್ತು ಡಿಪ್ಲೋಮ ಓದುತ್ತಿರುವ ಯುದ್ದ/ ಯುದ್ದದಂತಹ ಕಾರ್ಯಚರಣೆಯಲ್ಲಿ ಮಡಿದ ಯೋಧರ, ಮಾಜಿ ಸೈನಿಕರ ಮತ್ತು ಅವರ ಅವಲಂಬಿತರ ಗಂಡು ಮಕ್ಕಳಿಗೆ ಆದ್ಯತೆ ಹಾಗೂ ಅರ್ಹತೆ ಮೇರೆಗೆ ಉಚಿತ ಪ್ರವೇಶವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಮೈಸೂರು ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುತ್ತದೆ.

ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪ, ಜೆ.ಎಲ್.ಬಿ ರಸ್ತೆ, ಇವರ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಮೇ 31 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಇವರ ದೂ. ಸಂ.0821-2425240 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.