ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆ ಹೆಚ್ಚಾಗಿದ್ದು, ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ವಿಶ್ವವಿದ್ಯಾಲಯ ಕ್ರಾಫರ್ಡ್ ಭವನದ ಮುಂಭಾಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಶುಕ್ರವಾರವೂ ಮುಂದುವರಿದಿದೆ.
ಕೆ-ಸೆಟ್, ನೀಟ್, ಜೆಆರ್‌ಎಫ್ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಎಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು ಆಗ್ರಹಿಸಿದರು.
ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ರೋಹನ್, ರೋಜಾ, ಪ್ರದೀಪ್ ಇತರರಿದ್ದರು.