ವಿಜಯವಾಣಿ ಸುದ್ದಿಜಾಲ ಕೋಲಾರ
ಮುಖ್ಯಮಂತ್ರಿಗಳು ಕಳೆದ ೨೦೨೪ರ ಶಿಕ್ಷಕರ ದಿನಾಚರಣೆಯಂದು ನೀಡಿದ ಭರವಸೆಯಂತೆ ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡಲು ನಿರ್ದೇಶನ ನೀಡಲು ಆಗ್ರಹಿಸಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಶಾಖೆಯಿಂದ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ನಾಗರಾಜ್ ಮಾತನಾಡಿ, ಕಳೆದ ೨೦೨೪ರ ಸೆಪ್ಟೆಂಬರ್ ೪ ರಂದು ಮುಖ್ಯಮಂತ್ರಿಗಳ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸುಧೀರ್ಘ ಸಭೆ ನಡೆಸಿ, ಒಂದು ಸಮಿತಿಯನ್ನು ರಚಿಸುವ ಮೂಲಕ ೩೦ ದಿನಗಳಲ್ಲಿ ವರದಿ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಸ್ಪಷ್ಟ ಭರವಸೆ ನೀಡಿದ್ದು, ಇಲ್ಲಿಯವರೆಗೂ ಆ ಭರವಸೆ ಈಡೇರದಿರುವುದರಿಂದ ಶಿಕ್ಷಕರಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.
ಈ ಸಂಬAಧ ಈಗಾಗಲೇ ಕಾನೂನು ಇಲಾಖೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ಎರಡು ಸಲ ನೀಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯೂ ಕೂಡ ತಮ್ಮ ಅಭಿಪ್ರಾಯ ಮಂಡಿಸಿದೆ, ಇನ್ನು ಆರ್ಥಿಕ ಇಲಾಖೆ ತನ್ನ ಅಭಿಪ್ರಾಯ ನೀಡಬೇಕಾಗಿದ್ದು, ತಕ್ಷಣ ಮುಖ್ಯಮಂತ್ರಿಗಳು ಸದರಿ ಇಲಾಖೆಯಿಂದ ಅಭಿಪ್ರಾಯ ಪಡೆದು ಸಚಿವ ಸಂಪುಟದ ಅನುಮೋದನೆ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ೨೦೨೫ರ ಆಗಸ್ಟ್ ೨೫ ರೊಳಗಾಗಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಅಪ್ಪಯ್ಯಗೌಡ ಸೇರಿದಂತೆ ಎಲ್ಲಾ ಪದಾಧಿಕಾರಿಗಳು,ಶಿಕ್ಷಕರು ಹಾಜರಿದ್ದು, ಇದೇ ಸಂದರ್ಭದಲ್ಲಿ ಮನವಿಯನ್ನು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಡಿಡಿಪಿಐ ಅವರಿಗೂ ನೀಡಲಾಯಿತು.
ಚಿತ್ರ ೧೩ ಕೆ.ಎಲ್.ಆರ್. ೦೫ : ಕೋಲಾರದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಶಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.