ನ್ಯೂಸ್

ಮೃತ ವ್ಯಕ್ತಿಗೆ ಕರೊನಾ ಸೋಂಕು, ಉಡುಪಿಯಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆ.

ಉಡುಪಿ: ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ದಾವಣಗೆರೆ ಮೂಲದ 72 ವರ್ಷದ ವ್ಯಕ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತ ವ್ಯಕ್ತಿಯ ಗಂಟಲ ದ್ರವ ಸಂಗ್ರಹಿಸಿ ಕೋವಿಡ್ -19 ಪರೀಕ್ಷೆ ನಡೆಸಿದಾಗ ಕರೊನಾ ಪಾಸಿಟಿವ್ ದೃಡಪಟ್ಟಿದೆ. ಗುರುವಾರ ದಾಖಲಾಗಿದ್ದ ವೃದ್ಧರನ್ನು ಗಂಭೀರ ಆರೋಗ್ಯ ಪರಿಸ್ಥಿತಿ ಹಿನ್ನೆಲೆ ಬಳಿಕ ಉಡುಪಿಯ ಟಿಎಂಎ ಪೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ‌. ಜಿಲ್ಲಾಡಳಿತ ಮೂಲಕ ಕೋವಿಡ್-19 ಮಾರ್ಗಸೂಚಿ ಪ್ರಕಾರ ಶವ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.