ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ(ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳಿಗೆ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 04 ಕೊನೆಯ ದಿನಾಂಕವಾಗಿರುತ್ತದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ, ವರ್ಗ ಹಾಗೂ ಇತರೆ ರೂ. 1.00 ಲಕ್ಷ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನ್ನು ಸಂಪರ್ಕಿಸಿ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬೆಸೈಟ್ https://bcwd.karnataka.gov.in/ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.