ನ್ಯೂಸ್

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಕಾರ್ಯಕ್ರಮಗಳ ವಿವರ 5 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು 10ನೇ ತರಗತಿ ನಂತರದ ಕೋರ್ಸ್/ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಗಳಿಗೆ ಅರ್ಜಿ ಆಹ್ವಾನ.

ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಕಾರ್ಯಕ್ರಮಗಳು:- ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಚರಂಡಿ ಹಾಗೂ ಸಿ.ಸಿ.ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಲಿಸಲಾಗುವುದು, ವಸತಿ ರಹಿತರಿಗೆ ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ಮೂಲಕ ಮನೆಗಳ ನಿರ್ಮಾಣ ಮಾಡಲು ರೂ.1.20 ಲಕ್ಷಗಳ ಸಹಾಯಧನ ನೀಡಲಾಗುವುದು.

1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 2000/-ಗಳ ಮೆಟ್ರಿಕ್ ಪೂರ್ವ ವಿಶೇಷ ನೀಡಲಾಗುವುದು ಮತ್ತು 9 ರಿಂದ 10ನೇ ತರಗತಿಯವರೆಗೆ ರೂ. 4000/-ಗಳನ್ನು ವಾರ್ಷಿಕವಾರು ವಿದ್ಯಾರ್ಥಿಗಳ ಆಧಾರ್ ಸೀಡಿಂಗ್ ಆಗಿರುವ ಬ್ಯಾಂಕ್‌ಖಾತೆಗೆ ವಿದ್ಯಾರ್ಥಿವೇತನದ ಮೊತ್ತವನ್ನು ಜಮೆ ಮಾಡಲಾಗುವುದು. ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಮಿತಿಯೊಳಗಿರಬೇಕು. ಮೆಟ್ರಿಕ್ ನಂತರದ ಐ.ಟಿ.ಐ, ಪಿಯುಸಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 3000/- ಮತ್ತು ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರೂ. 4000/- ಹಾಗೂ ತಾಂತ್ರಿಕ ವೃತ್ತಿಪರ ಕೋರ್ಸುಗಳಿಗೆ ರೂ 5000/-ಗಳನ್ನು ಮಂಜೂರು ಮಾಡಲಾಗುವುದು.

ಮೈಸೂರು ಜಿಲ್ಲಾ ವಿಭಾಗದಲ್ಲಿ (ಚಾಮರಾಜನಗರ, ಮಂಡ್ಯ, ಹಾಸನ, ಮಡಿಕೇರಿ, ಚಿಕ್ಕಮಂಗಳೂರು, ಉಡುಪಿ ಮತ್ತು ದಕ್ಷಿಣಕನ್ನಡ) ಜಿಲ್ಲೆಗೆ ಸೇರಿದ ಅಲೆಮಾರಿ/ಅರೆ ಅಲೆಮಾರಿ ಜನಾಂಗದ 6 ರಿಂದ ದ್ವಿತೀಯ ಪಿಯುಸಿ ವರೆಗೆ ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ವಿದ್ಯಾಭ್ಯಾಸ ನೀಡಲು ವಸತಿ ಶಾಲೆ ಪ್ರಾರಂಭವಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು. ದೂ. ಸಂ: 0821-2342917 ಹಾಗೂ ಪ್ರಾಂಶುಪಾಲರ ದೂರವಾಣಿ ಸಂಖ್ಯೆ:- 7026929501 ಸಂಪರ್ಕಿಸುವುದು. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಮೈಸೂರು, ನಂಜನಗೂಡು, ಹುಣಸೂರು, ಟಿ.ನರಸೀಪುರ, ಹೆಚ್.ಡಿ.ಕೋಟೆ, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ಇವರನ್ನು ಸಂಪರ್ಕಿಸಬಹುದು ಎಂದು ಮೈಸೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.