ಏಪ್ರಿಲ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಘಂಟೆಯ ವರೆಗೆ 220/666/11 ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ. ಪೊಲೀಸ್ ಲೇಔಟ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಭುಗತಹಳ್ಳಿ, ಚಿಕ್ಕಹಳ್ಳಿ, ಚೋರನಹಳ್ಳಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಆದುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ. ಕಾರ್ಯ ಮತ್ತು ಪಾಲನೆ, ನ.ರಾ.ಮೊಹಲ್ಲಾ ವಿಭಾಗ, ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.