ನ್ಯೂಸ್

ಮೈಸೂರಿನಲ್ಲಿ ವಾಲ್ಮೀಕಿ ಜಯಂತಿ

ಮೈಸೂರಿನಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎಚ್.ವಿ.ರಾಜೀವ್ ಇತರರು ಇದ್ದರು.

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ , ಮೈಸೂರು ನಗರಪಾಲಿಕೆ , ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮೈಸೂರು ನಗರ ಹಾಗೂ ತಾಲ್ಲೂಕು ನಾಯಕ ಜನಾಂಗದ ಸಂಘ ಸಂಸ್ಥೆಗಳಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಆಚರಿಸಲಾಯಿತು.

ಕಲಾಮಂದಿರದಲ್ಲಿರುವ ಮನೆ‌ ಅಂಗಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಲ್ಮೀಕಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಲಾಯಿತು,

ಇದೆ ಸಂಧರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ 621 ಅಂಕ ಪಡೆದ ಮೈಸೂರಿನ ತರುಳಬಾಳು ಶಾಲೆಯ ವಿದ್ಯಾರ್ಥಿನಿ ಅಶ್ವಿನಿ ಅವರಿಗೆ ಒಂದು ಲಕ್ಷ ರೂ. ನಗದು ಪುರಸ್ಕಾರ ನೀಡುವ ಮೂಲಕ ಸನ್ಮಾನಿಸಲಾಯಿತು .

ಕಾರ್ಯಕ್ರಮದಲ್ಲಿ
ಶಾಸಕ ಜಿ.ಟಿ. ದೇವೆಗೌಡ , ಎಲ್. ನಾಗೇಂದ್ರ , ಮುಡಾ ಅಧ್ಯಕ್ಷ ಎಚ್. ವಿ. ರಾಜೀವ್ , ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್ , ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ ಇತರರು ಹಾಜರಿದ್ದರು.