ಪಿರಿಯಾಪಟ್ಟಣ: ಪಟ್ಟಣದ ಪುಷ್ಪಾ ವಿದ್ಯಾಸಂಸ್ಥೆಯ ಸಿಬಿಎಸ್‌ಇ ವಿಭಾಗದಲ್ಲಿ ಭಾನುವಾರ ನೀಟ್ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.
ಮೈಸೂರು, ಕೊಡಗು, ಹಾಸನ, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಬೆಳಗ್ಗೆ 11.30ರಿಂದಲೇ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿತ್ತು. ಕೋವಿಡ್ ಭೀತಿಯಿಂದಾಗಿ ವಿಪಕ್ಷಗಳು ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿಯೂ ನೀಟ್ ಪರೀಕ್ಷೆ ನಡೆಸಿಯೇ ತೀರುವುದಾಗಿ ದೃಢ ನಿರ್ಧಾರ ತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿಯಂತೆ ಪರೀಕ್ಷಾ ಕೇಂದ್ರವನ್ನು ಸಜ್ಜುಗೊಳಿಸಲಾಗಿತ್ತು.
ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಕೇಂದ್ರದೊಳಗೆ ಪ್ರವೇಶವಿರಲಿಲ್ಲ. ಮುಖ್ಯದ್ವಾರದಲ್ಲಿ ವಿದ್ಯಾರ್ಥಿಗಳಿಗೆ ಮೆಟಲ್ ಡಿಟೆಕ್ಟರ್‌ನಿಂದ ತಪಾಸಣೆ ಹಾಗೂ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತಿತ್ತು. ಎಲ್ಲ ಪರೀಕ್ಷಾರ್ಥಿಗಳಿಗೂ ಸ್ಯಾನಿಟೈಸರ್, ಮಾಸ್ಕ್ ನೀಡಲಾಯಿತು.
ರಾಜ್ಯದಲ್ಲಿ ಮೈಸೂರು ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಮಾತ್ರ ನೀಟ್ ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಪಿರಿಯಾಪಟ್ಟಣದಲ್ಲಿ ನೀಟ್ ಪರೀಕ್ಷಾ ಕೇಂದ್ರವನ್ನು ಇದೇ ಮೊದಲ ಬಾರಿಗೆ ತೆರೆದಿರುವುದು ವಿಶೇಷವಾಗಿತ್ತು.
ದೂರದ ಊರುಗಳಿಂದ ತಮ್ಮ ವಾಹನಗಳಲ್ಲಿ ಮಕ್ಕಳನ್ನು ಪರೀಕ್ಷೆಗೆ ಕರೆತಂದಿದ್ದ ಪಾಲಕರಿಗೆ ಪಟ್ಟಣದ ಜಿಜೆಸಿಪಿ ಕಾಲೇಜು ಮೈದಾನದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪಿರಿಯಾಪಟ್ಟಣ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕಿದ್ದ 300 ವಿದ್ಯಾರ್ಥಿಗಳಲ್ಲಿ 209 ವಿದ್ಯಾರ್ಥಿಗಳು ಹಾಜರಾಗಿದ್ದು, ಉಳಿದ 91 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಫಾದರ್ ಜಾರ್ಜ್ ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ.
ಕ್ಷೆಗೆ ಹಾಜರಾಗಬೇಕಿದ್ದ 300 ವಿದ್ಯಾರ್ಥಿಗಳಲ್ಲಿ 209 ವಿದ್ಯಾರ್ಥಿಗಳು ಹಾಜರಾಗಿದ್ದು, ಉಳಿದ 91 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಫಾದರ್ ಜಾರ್ಜ್ ವಿಜಯವಾಣಿಗೆ ಮಾಹಿತಿ ನೀಡಿದ್ದಾರೆ.