ಚಿತ್ರದುರ್ಗ: ಯಾರೇ ವಿರೋಧಿಸಲಿ, ಟೀಕಿಸಲಿ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪಾಲಿಗೆ ಸಿದ್ದರಾಮಯ್ಯ ಅವರೇ ಅಂಬೇಡ್ಕರ್ ಎಂದು ಮಾಜಿ ಸಚಿವ ಎಚ್.ಆಂಜನೇಯ ಪುನರುಚ್ಚರಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಹೊರತುಪಡಿಸಿ ದೇಶದ ಯಾವ ರಾಜ್ಯದಲ್ಲೂ ಎಸ್ಸಿ-ಎಸ್ಟಿ ಸಮುದಾಯಕ್ಕೆ ಹೆಚ್ಚಿನ ಕೊಡುಗೆ ನೀಡಿ, ಅವರ ಬಾಳಿಗೆ ಬೆಳಕಾದ ಮುಖ್ಯಮಂತ್ರಿ ಇಲ್ಲ. ಹೀಗಾಗಿ ಅಂಬೇಡ್ಕರ್ ಎನ್ನುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.