ನ್ಯೂಸ್

ಯಾವುದೇ ಕಾರಣಕ್ಕೂ ಬದಲಾವಣೆ ಬೇಡ : ನಾರಾಯಣಗೌಡ

ಸಬರ್ಬನ್ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸಿದರೆ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.

ಸಿಟಿ ಸೆಂಟರ್‌ನಲ್ಲಿರುವುದರಿಂದ ಎಲ್ಲದಕ್ಕೂ ಅನುಕೂಲವಾಗಿದೆ. ಈಗ ಸಬರ್ಬನ್ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರಿಸಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಯಾವುದೇ ಕಾರಣಕ್ಕೂ ಸ್ಥಳ ಬದಲಾವಣೆ ಬೇಡ.