ಇಡೀ ವಿಶ್ವ ಕೃತಕ ಬುದ್ಧಿಮತ್ತೆಯ ಸ್ಪರ್ಧಾತ್ಮಕ ಜಗತ್ತಿನ ಶರವೇಗದ ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದೆ. ಆದರೆ ಬಜೆಟ್ ಮಾತ್ರ ಸರಿಯಾಗಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ತಿಳಿಸಿದ್ದಾರೆ.
ಈ ಸಮಯದಲ್ಲಿ ಧಾರ್ಮಿಕ ಉನ್ಮಾದದ ಸ್ನಾನ ಇತ್ಯಾದಿಗಳಿಗೆ ಒತ್ತು ನೀಡಿ, ಗೋಮೂತ್ರದ ಶ್ರೇಷ್ಠತೆ ಸಾರುತ್ತಾ ಅಂಧಯುಗದತ್ತ ದೇಶವನ್ನು ಕೊಂಡೊಯ್ಯುತ್ತಿರುವ ಬಿಜೆಪಿ ಸರ್ಕಾರ ಮತ್ತೊಮ್ಮೆ ತನ್ನ ಪ್ರತಿಗಾಮಿ ಬಜೆಟ್ ಮೂಲಕ ಇಡೀ ದೇಶಕ್ಕೆ ಮಂಕುಬೂದಿ ಎರಚಿದೆ. ಕಾರ್ಪೊರೇಟ್ ಪ್ರೇಮ ತೋರುವ ಮತ್ತು ಬಡವರ ತುಳಿತ ಕಾಯಂಗೊಳಿಸುವ ಈ ಬಜೆಟ್‌ನಲ್ಲಿ ಅಭಿವೃದ್ಧಿಯ ಯಾವುದೇ ಆಶಾಕಿರಣ ಕಾಣುತ್ತಿಲ್ಲ. ಈ ದೇಶನ ಬಹುಸಂಖ್ಯಾತರಾದ ಮಹಿಳೆಯರು, ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತರು, ಹಿಂದುಳಿದ ಅಲ್ಪಸಂಖ್ಯಾತರು, ವಿದ್ಯಾರ್ಥಿ ಸಮೂಹ, ಎಸ್ಸಿಎಸ್ಟಿ ಸಮುದಾಯ, ಕಾರ್ಮಿಕರು, ರೈತರಿಗೆ ಈ ಸರ್ಕಾರ ಯಾವುದೇ ಖಚಿತ ನೆರವು ನೀಡಿಲ್ಲ.