students 
ನ್ಯೂಸ್

ಯುಪಿಎಸ್‌ಸಿ ಪರೀಕ್ಷೆ ಸುಸೂತ್ರ


ಬೆಂಗಳೂರು
ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರೀಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಬೆಂಗಳೂರು, ಮೈಸೂರು ಮತ್ತು ಧಾರವಾಡಗಳ ಕೇಂದ್ರಗಳಲ್ಲಿ ಭಾನುವಾರ ಸುಸೂತ್ರವಾಗಿ ನಡೆಯಿತು.
ಪ್ರಸಕ್ತ ವರ್ಷದಲ್ಲಿ ಕರ್ನಾಟಕ ರಾಜ್ಯದಿಂದ ಸುಮಾರ 37 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆ ಹಾಜರಾದ ಅಭ್ಯರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು, ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಥರ್ಮಲ್ ಸ್ಕ್ರೀನಿಂಗ್ ಮೂಲಕ ದೇಹದ ಉಷ್ಣಾಂಶ ಪರೀಕ್ಷೆ ಮಾಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಜ್ವರ ಸೇರಿದಂತೆ ಕರೊನಾ ಲಕ್ಷಣಗಳಿದ್ದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು ಎಂದು ಕೆಲ ಅಭ್ಯರ್ಥಿಗಳು ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ಜೂನ್ ತಿಂಗಳಲ್ಲಿ ನಡೆಯುತ್ತಿದ್ದ ಪೂರ್ವ ಭಾವಿ ಪರೀಕ್ಷೆಯನ್ನು ಕರೊನಾ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಮೂರು ತಿಂಗಳ ಕಾಲ ಮುಂದೂಡಲಾಗಿತ್ತು. ಪರೀಕ್ಷೆ ಕುರಿತು ಮಾಹಿತಿ ನೀಡಿದ ಧನಂಜಯ್, ಕಳೆದ ವರ್ಷಕ್ಕಿಂತ ಈ ಬಾರಿ ಪರೀಕ್ಷೆ ತುಂಬಾ ಕಷ್ಟಕರವಾಗಿತ್ತು. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅರ್ಥ ಮಾಡಿಕೊಂಡು ಬರೆಯೋದು ಕಷ್ಟವಾಗಿತ್ತು. ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಮತ್ತು ಯೋಜನೆಗಳ ಮೇಲೆ ಪ್ರಶ್ನೆಗಳು ಕೇಳೇ ಇಲ್ಲ. ಕೃಷಿ ವಿಷಯದ ಬಗ್ಗೆ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದರು ಎಂದು ಮಾಹಿತಿ ನೀಡಿದರು.