ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಟಕದ ಅಧ್ಯಕ್ಷರಾಗಿ ನಿಶಾಂತ್ ಪಟೇಲ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ವಿವಿಧ ಟಕಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ನಿಶಾಂತ್ ಪಟೇಲ್ 2260 ಮತ ಪಡೆದು ಚುನಾಯಿತರಾಗಿದ್ದಾರೆ. ಇವರು ಈ ಹಿಂದೆ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.