ಹಳೇ ದ್ವೇಷದ ಹಿನ್ನೆಲೆಯಲ್ಲಿ ಉದಯಗಿರಿಯ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಹೋಗುತ್ತಿದ್ದ ಯುವಕನ ಮೇಲೆ ನಾಲ್ವರ ಗುಂಪು ದಾಳಿ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದೆ. ಹಲ್ಲೆಗೊಳಗಾದ ಉದಯಗಿರಿ ನಿವಾಸಿ ವಾಸೀಂ(28)ನನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಕಾರ್ತಿಕ್, ವೇಲು ಸೇರಿದಂತೆ ನಾಲ್ವರು ತಡೆದು ಗಲಾಟೆ ಮಾಡಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.