ನ್ಯೂಸ್

ರಂಗಗೀತೆಗಳ ಕಲಿಕಾ ಕಾರ್ಯಾಗಾರ ಸಮಾರೋಪ

ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆ ವತಿಯಿಂದ ನಗರದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿಯಲ್ಲಿ ಆಯೋಜಿಸಿದ್ದ 15 ದಿನಗಳ ರಂಗ ಸಂಗೀತ ಮತ್ತು ಅಭಿನಯ ಸಮೇತ ರಂಗಗೀತೆಗಳ ಕಲಿಕಾ ಕಾರ್ಯಾಗಾರದ ಸಮಾರೋಪ ಸಮಾರಂಭ ಜು.17ರಂದು ಸಂಜೆ 5ಕ್ಕೆ ವಿವಿ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆ ನಿರ್ದೇಶಕ ಮಲ್ಲಿಕಾರ್ಜುನ ಕಡಕೊಳ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ ಸಮಾರೋಪ ಭಾಷಣ ಮಾಡುವರು. ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಅಧ್ಯಕ್ಷತೆ ವಹಿಸುವರು, ಪ್ರಮುಖರಾದ ವೈ.ಎಂ.ಪುಟ್ಟಣ್ಣಯ್ಯ, ರಾಜಪ್ಪ ಕಿರಗಸೂರು, ಸತೀಶ್ ತಿಪಟೂರು, ಡಾ.ರಾಜಪ್ಪ ದಳವಾಯಿ ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಾಗಾರದಲ್ಲಿ ಹೊಸದಾಗಿ ರಂಗಗೀತೆ ಕಲಿಯ ಬಯಸಿದ್ದ 20 ಜನರು ಪಾಲ್ಗೊಂಡಿದ್ದರು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಈ ರೀತಿಯ ಕಾರ್ಯಾಗಾರ ಆಯೋಜಿಸಲು ಸಂಸ್ಥೆ ನಿರ್ಧರಿಸಿ, ಮೊದಲನೆಯದಾಗಿ ಮೈಸೂರು ವಿಭಾಗದಲ್ಲಿ ಆಯೋಜಿಸಲಾಗಿತ್ತು ಎಂದರು.