ಮೈಲುತುತ್ತು ಮತ್ತು ರಸಗೊಬ್ಬರಗಳ ಗುಣಮಟ್ಟವನ್ನು ಸಂಬಂಧಪಟ್ಟ ಇಲಾಖೆಗಳು ಪರಿಶೀಲಿಸಬೇಕೆಂದು ಒತ್ತಾಯಿಸಿ ತಾಲೂಕು ರೈತ ಸಂಘದ ಪದಾಧಿಕಾರಿಗಳು ಕಂದಾಯ ಇಲಾಖೆ ಶಿರಸ್ತೇದಾರ್ ಪ್ರವೀಣ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಶ್ರೀಧರ್ ರಾವ್, ಚನ್ನಕೇಶವ, ಶ್ರೀನಿವಾಸ್ ಹಾಲಂದೂರು ಇದ್ದರು. 
ನ್ಯೂಸ್

ರಸಗೊಬ್ಬರ ಗುಣಮಟ್ಟ ಪರಿಶೀಲಿಸಿ

ಶೃಂಗೇರಿ: ಮೈಲುತುತ್ತು ಮತ್ತು ರಸಗೊಬ್ಬರಗಳ ಗುಣಮಟ್ಟವನ್ನು ಸಂಬಂಧಪಟ್ಟ ಇಲಾಖೆಗಳು ಪರಿಶೀಲಿಸಬೇಕು ಎಂದು ತಾಲೂಕು ರೈತ ಸಂಘದ ಪದಾಧಿಕಾರಿಗಳು ಸೋಮವಾರ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆ ಶಿರಸ್ತೇದಾರ್ ಪ್ರವೀಣ್‌ಕುಮಾರ್‌ಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ಪರವಾನಗಿ ಪಡೆದ ಅಂಗಡಿಗಳಲ್ಲಿ ಮೈಲುತುತ್ತು ಮತ್ತು ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ರೈತರು ಅಡಕೆ, ಕಾಫಿ, ಕಾಳುಮೆಣಸು ಬೆಳೆಗಳಿಗೆ ಮೈಲುತುತ್ತು ಹಾಗೂ ರಸಗೊಬ್ಬರಗಳನ್ನು ಬಳಕೆ ಮಾಡುತ್ತಿದ್ದಾರೆ. ಆದರೂ ಬೆಳೆಗಳು ಕೊಳೆರೋಗಕ್ಕೆ ತುತ್ತಾಗುತ್ತಿವೆ. ಹಾಗಾಗಿ ಸಂಬಂಧಪಟ್ಟ ಇಲಾಖೆಗಳು ಪ್ರಯೋಗಾಲಯಗಳಲ್ಲಿ ಅವುಗಳ ಗುಣಮಟ್ಟ ಪರಿಶೀಲಿಸುವ ಅಗತ್ಯವಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ರೈತರಿಗೆ ವಿತರಿಸಬೇಕು. ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕಿದೆ ಎಂದರು.

ಸಂಘದ ಪದಾಧಿಕಾರಿಗಳಾದ ಚಂದ್ರಪ್ಪ ತೆಕ್ಕೂರು, ಯೋಗಪ್ಪ ನೀರ್ಕುಳ್ಳಿ, ಶ್ರೀನಿವಾಸ ಹಾಲಂದೂರು, ಶ್ರೀಧರ್ ಭಟ್ ಹೊಳಕೊಪ್ಪ, ಪೂರ್ಣೇಶ್ ಗೌಡ, ಜಿ.ಅನಂತಯ್ಯ, ಚನ್ನಕೇಶವ, ಬಂಡ್ಲಾಪುರ ಶ್ರೀಧರ್ ರಾವ್ ಇದ್ದರು.