ನ್ಯೂಸ್

ರಾಜ್ಯ ಒಕ್ಕಲಿಗ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ ಆಡಳಿತಾಧಿಕಾರಿ ಅವಧಿಯನ್ನು ೆ.21ರಿಂದ ಮುಂದಿನ 3 ತಿಂಗಳವರೆಗೆ ವಿಸ್ತರಿಸಿ ಸಹಕಾರ ಇಲಾಖೆ ಆದೇಶಿಸಿದೆ. ಸಂಘದ ಆಡಳಿತಾಧಿಕಾರಿ ಅವಧಿ ೆ.20ಕ್ಕೆ ಮುಕ್ತಾಯವಾಗಲಿದೆ. ಇನ್ನೂ ಚುನಾವಣಾಧಿಕಾರಿ ನೇಮಕಗೊಂಡು ಸಂಘದ ಚುನಾವಣೆ ಪ್ರಕ್ರಿಯೆ ನಡೆಸಲು ಅಂದಾಜು 3-4 ತಿಂಗಳ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳ ಅವಧಿಗೆ ಆಡಳಿತಾಧಿಕಾರಿ ಅವಧಿಯನ್ನು ವಿಸ್ತರಿಸಲು ಕೋರಲಾಗಿತ್ತು. ಆದರೆ, ಮುಂದಿನ 3 ತಿಂಗಳ ಅವಧಿಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಆಡಳಿತಾಧಿಕಾರಿ ಸದರಿ ಅವಧಿಯೊಳಗೆ ಸಂಘದಲ್ಲಿನ ನ್ಯೂನತೆ ಸರಿಪಡಿಸಿ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ ಹಾಗೂ ಚುನಾಯಿತ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಿ ಸರ್ಕಾರಕ್ಕೆ ವರದಿ ನೀಡಲು ಇಲಾಖೆ ಸೂಚಿಸಿದೆ. 2018ರ ಆ.20ರಿಂದ ಸಂಘದ ಆಡಳಿತಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ.