ನ್ಯೂಸ್

ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ / ಬಿಜೆಪಿ ಯಿಂದ ಎಚ್ಚರಿಸುವ ಕೆಲಸ ಮಾಡಲಾಗುವುದು/ ಯಡಿಯೂರಪ್ಪ

ವಿಜಯವಾಣಿ ಸುದ್ದಿಜಾಲ ಕೋಲಾರ

ರಾಜ್ಯ ಸರ್ಕಾರ ಇದ್ದರೂ ಸತ್ತಂತಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ ಹಾಗಾಗಿ ಎಚ್ಚರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಭಾನುವಾರ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂಜಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಕೋಲಾರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಅವರ ಆರೋಗ್ಯ ಮತ್ತೊಮ್ಮೆ ಪ್ರಧಾನಿ ಆಗಲೆಂದು ಪ್ರಾರ್ಥನೆ ಮಾಡಲಿದ್ದೇವೆ. ಹಾಗೂ ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ, ಮುಳಬಾಗಿಲಿನಿಂದ ಹೋರಾಟ ಪ್ರಾರಂಭ ಮಾಡಲಿದ್ದೇವೆ ಎಂದರು.

ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸದ ನಂತರ ರಾಜ್ಯದ ಉದ್ದಗಲಕ್ಕೂ ಕಾರ್ಯಕರ್ತ ಸಭೆಗಳನ್ನು ನಡೆಸಿ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ೨೫ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಮೋದಿಯವರಿಗೆ ಉಡುಗೊರೆ ನೀಡಲಿದ್ದೇವೆ ಎಂದರು.

ಗ್ಯಾರಂಟಿಗಳನ್ನ ಕೊಟ್ಟು ಬೇರೆಲ್ಲಾ ಯೋಜನೆಗಳಿಗೆ ಮಾನ್ಯತೆ ಇಲ್ಲದಂತಾಗಿದೆ. ಗ್ಯಾರಂಟಿಗಳ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ, ಇದು ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ. ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳೂ ಸಂಪೂರ್ಣ ಸ್ಥಗಿತವಾಗಿದೆ. ರಾಜ್ಯದಲ್ಲಿ ಒಂದು ಒಂದು ಕೀ ಮೀ ರಸ್ತೆ ಮಾಡಲು ಇವರಿಂದ ಸಾಧ್ಯವಾಗಿಲ್ಲ ಎಂದರು.

ರಾಜ್ಯ ಸರ್ಕಾರ ಕದ್ದುಮುಚ್ಚಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ. ಮಂಡ್ಯ ಮೈಸೂರು ಭಾಗದಲ್ಲಿ ಈಗಾಗಲೆ ಹೋರಾಟ ಆರಂಭವಾಗಿದೆ. ಇಂದಿನಿAದ ನಾವು ಕಾವೇರಿ, ಬರ ಸಮಸ್ಯೆ ವಿರುದ್ದ ಹೋರಾಟ ಮಾಡಲಿದ್ದೇವೆ. ಮೈತ್ರಿ ಇನ್ನೂ ಮಾತುಕತೆ ನಡೆಯುತ್ತಿದೆ ಹಾಗಾಗಿ ಅದರ ಬಗ್ಗೆ ಈಗಲೆ ಮಾತನಾಡುವುದು ಬೇಡ ಎಂದರು.

ಮಾಜಿ ಸಚಿವ ಅಶ್ವಥ್ ನಾರಾಯಣ ಮಾತನಾಡಿ, ಕಾಂಗ್ರೇಸ್ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಕಾಂಗ್ರೇಸ್ ಪಕ್ಷದಲ್ಲಿ ಅವರ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುತ್ತಿಲ್ಲ. ಸರ್ಕಾರದಲ್ಲಿ ಯಾರು ಮುಖ್ಯಮಂತ್ರಿ ಎಂದು ಹುಡುಕುತ್ತಿದ್ದಾರೆ. ಹೀಗಿರುವಾಗ ಆಪರೇಷನ್ ಹಸ್ತ ಅಲ್ಲ ಅವರ ಪಕ್ಷದಲ್ಲೇ ಆಪರೇಷನ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ, ರೈತರು ಆತ್ಮಹತ್ಯೆಗೆ ಹೋಗುತ್ತಿದ್ದಾರೆ. ಕಾಂಗ್ರೇಸ್ ನವರು ಆಡಳಿತ ನಡೆಸಿದೆ, ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಕರ್ನಾಟದಲ್ಲಿ ಕಾಂಗ್ರೇಸ್ ಸರ್ಕಾರ ವಿದ್ಯುತ್ ನೀಡುತ್ತಿಲ್ಲ. ಇದರಿಂದ ರೈತರ ಬೆಳೆಗಳು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗುತ್ತಿದೆ. ಸತ್ತ ಪ್ರಾಣಿಯನ್ನು ಕಿತ್ತು ತಿನ್ನುತ್ತಿದೆ. ವರ್ಗಾವಣೆ ದಂಧೆ ಶುರುವಾಗಿದೆ. ವರ್ಗಾವಣೆ ಆದವರಿಗೆ ಪೋಸ್ಟಿಂಗ್ ನೀಡುತ್ತಿಲ್ಲ. ಸ್ವತಂತ್ರö್ಯ ಬಂದ ನಂತರದಿAದ ಇಂತಹ ಸರ್ಕಾರವನ್ನು ನೋಡಿಲ್ಲ. ತಮಿಳು ನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ದಲಿತರ ೧೧೧೦೪ ಕೋಟಿ ಹಣವನ್ನು ಬೇರೆಯದ್ದಕ್ಕೆ ಬಳಸುತ್ತಿದ್ದಾರೆ. ದಲಿತರ ಶಿಕ್ಷಣಕ್ಕೆ ಮತ್ತು ಉದ್ಯೋಗಕ್ಕೆ ಕೊಡಬೇಕಾಗಿದ್ದ ಹಣ ಇದು. ಬಸ್ ಫ್ರೀ ಅಂತ ಹೇಳಿ ಕೆ.ಎಸ್.ಆರ್.ಟಿ.ಸಿ.ಗೆ ಕೊಡುತ್ತಿದ್ದಾರೆ. ದಲಿತರ ಮೀಸಲು ಹಣವನ್ನು ದಲಿತರ ಕಲ್ಯಾಣಕ್ಕೆ ಬಳಸಬೇಕು ಎಂದು ಒತ್ತಾಯಪಡಿಸಿದರು.

ಸಂಸದ ಮುನಿಸ್ವಾಮಿ, ಮಾಜಿ ಸಚಿವ ಕಟ್ಟಾ ಸುಬ್ರಮಣಿ ನಾಯ್ಡು, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ಮಾಜಿ ಶಾಸಕ ವೈ.ಸಂಪAಗಿ ಮುಂತಾದವರು ಇದ್ದರು.

ಚಿತ್ರ ೧೭ ಕೆ.ಎಲ್.ಆರ್. ೦೩ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವುದು. ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಶ್ವಥ್ ನಾರಾಯಣ, ಕಟ್ಟಾ ಸುಬ್ರಮಣ್ಯನಾಯ್ಡು ಮುಂತಾದವರಿದ್ದರು.