- ಸಚಿವ ಡಾ.ಕೆ.ಸುಧಾಕರ್ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 1 ಲಕ್ಷಕ್ಕೂ ಅಧಿಕ ಕರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು. ಮಂಗಳವಾರ ಒಂದೇ ದಿನ 1,04, 348 ಕೋವಿಡ್ ಟೆಸ್ಟ್ ನಡೆಸುವ ಮೂಲಕ ಈ ಹಿಂದೆ ಹೇಳಿದಂತೆ ನಿಗದಿತ ಗುರಿ ತಲುಪಿದ್ದೇವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜ್ಯಾದ್ಯಂತ ಇರುವ 146 ಲ್ಯಾಬ್‌ಗಳ ಮೂಲಕ 55,690 ಆರ್‌ಟಿಪಿಸಿಆರ್ ಹಾಗೂ 48,658 ರ‌್ಯಾಟ್ ಟೆಸ್ಟ್ ನಡೆಸಲಾಗಿದೆ. ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ.