ನ್ಯೂಸ್

ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ರಾಜಭವನದ ಕದ ತಟ್ಟಿದ‌ ಬಿಜೆಪಿ ನಿಯೋಗ. ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿರುದ್ಧ ದೂರು. ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ‌ ವಿಷಯ ಪ್ರಸ್ತಾಪ.
ಪರಿಷತ್ ಕಲಾಪವನ್ನು ಮಂಗಳವಾರ ನಡೆಸುವಂತೆ ನಿರ್ದೇಶನ ನೀಡಬೇಕೆಂದು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ.
ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗವು ಕಲಾಪವನ್ನು ಶುಕ್ರವಾರ ದಿಢೀರ್ ನೆ ಅನಿರ್ದಿಷ್ಟಾವಧಿಗೆ ಮುಂದೂಡಿ, ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಗೆ ಅಚಕಾಶ ನೀಡಲಿಲ್ಲವೆಂದು ರಾಜ್ಯಪಾಲರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದೆ