ಗದಗ:
ಶುಕ್ರವಾರದಿಂದ ಮೂರು ದಿನಗಳ ಕಾಲ ಜರಗುವ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಸಾರಿಗೆ ಬಸ್ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹಾಗೂ ಎಂಸಿಎ ನಿಗಮದ ಅಧ್ಯ ಎಂ.ಎಸ್. ಕರಿಗೌಡ್ರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಉಚಿತ ಬಸ್ ಸೇವೆಗೆ ಚಾಲನೆ ನೀಡಿದ ಮಾತನಾಡಿದ ಅವರು, ಲಕ್ಕುಂಡಿ ಉತ್ಸವಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸುವ ಎಲ್ಲ ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ದೊರೆಯಬೇಕು. ಇತರ ಜಿಲ್ಲೆಗಳಿಂದ ಬರುವವರಿಗೆ ಸುಗಮ ಸಾರಿಗೆ ಸಂಚಾರ ತಲುಪಬೇಕು ಎನ್ನುವ ಉದ್ದೇಶದಿಂದ ಸಾರಿಗೆ ಇಲಾಖೆ ಜತೆ ಚಚಿರ್ಸಿ ಉಚುತ ಸೇವೆ ಒದಗಿಸಲಾಗಿದೆ. ಜಿಲ್ಲೆಯ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಉತ್ಸವದಲ್ಲಿ ಭಾಗವಹಿಸಿಬೇಕು ಎಂದರು.
ಒಟ್ಟು 10 ಬಸ್ಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ಸಂಚರಿಸಲು ಸೌಲಭ್ಯ ಒದಗಿಸಿದೆ. ಗದಗಿನ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಬಸ್ ನಿಲ್ದಾಣದಿಂದ ನಿರಂತರವಾಗಿ ಬಸ್ಗಳು ಸಂಚರಿಸಲಿವೆ. ಸಾರ್ವಜನಿಕರು ಬಸ್ಗಳ ಉಚಿತ ಸೇವೆ ಪ್ರಯೋಜನ ಪಡೆಯಬೇಕು ಎಂದು ಎಸ್.ವಿ. ಸಂಕನೂರು ಹೇಳಿದರು.
ಉದ್ಘಾಟನೆ ನಂತರ ಅದೇ ಬಸ್ನಲ್ಲಿ ಲಕ್ಕುಂಡಿಯವರೆಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಸಂಚರಿಸುವ ಮೂಲಕ ಮಾದರಿಯಾದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪವಿಭಾಗಾಧಿಕಾರಿ ಅನ್ನರ್ಪೂಣ ಎಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಡಿಯುಡಿಸಿ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳೆ, ಪ್ರದಿಪ ನವಲಗುಂದ ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶೀನಯ್ಯ ಹಾಗೂ ಸಿಬ್ಬಂದಿಗಳು ಇದ್ದರು.