ಜನ್ಮದಿನದ ಸಂಭ್ರಮದಲ್ಲಿ ಗೌಸಿಯಾನಗರದ ಯುವಕ ತಬ್ರೇಜ್ ಲಾಂಗ್‌ನಲ್ಲಿ ಕೇಕ್ ಕತ್ತರಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಜನವರಿ 2 ರಂದು ತನ್ನ ಸ್ನೇಹಿತರೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡಿದ್ದು, ಈ ವೇಳೆ ಲಾಂಗ್‌ನಿಂದ ಕೇಕ್ ಕತ್ತರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಬಳಿಕ ಈ ಬಗ್ಗೆ ಈ ಮಾಹಿತಿ ಅರಿತ ಉದಯಗಿರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ ವಿಡಿಯೋ ಅಪ್ ಲೋಡ್ ಮಾಡಿರುವುದು ಬೆಳಕಿಗೆ ಬಂದಿದೆ. ಯಾವುದೇ ಪರವಾನಗಿ ಇಲ್ಲದೆ ಮಾರಕಾಸ್ತ್ರ ಹೊಂದಿರುವುದು ಅಪರಾಧವಾಗುತ್ತದೆ ಎಂದು ಪರಿಗಣಿಸಿದ ಉದಯಗಿರಿ ಪೊಲೀಸರು ತಬ್ರೇಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.