ನ್ಯೂಸ್

ಲಾರಿಗೆ ಕಾರು ಡಿಕ್ಕಿ ಮೂವರ ದುರ್ಮರಣ

ಚಿತ್ರದುರ್ಗ: ಹೊರವಲಯದ ಮದಕರಿಪುರ ರಾಷ್ಟ್ರೀಯ ಹೆದ್ದಾರಿ 4ರ ಮೇಲ್ಸೇತುವೆಯಲ್ಲಿ ಶುಕ್ರವಾರ ಕಾರೊಂದು ಮುಂದೆ ಸಂಚರಿಸುತ್ತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದು, ಎರಡು ವರ್ಷದ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40), ಯಶಸ್ (2) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಪ್ರಯಾಣ ಬೆಳೆಸುವ ವೇಳೆ ಈ ಅಪಘಾತ ಸಂಭವಿಸಿದೆ. ಇನ್ನೂ ಈ ದುರ್ಘಟನೆಯಿಂದ ಕಾರಿನೊಳಗಿದ್ದ ಇನ್ನಿಬ್ಬರಾದ ರಶ್ಮಿ (32), ಫಣಿರಾಜ್ (36) ಎಂಬುವವರಿಗೂ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ, ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಎಸ್ಐ ಮುದ್ದು ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.