ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನೆಲೆ ಕಲ್ಪಿಸುವ ಸಲುವಾಗಿ ಸರ್ಕಾರ ಜಾರಿಗೆ ತಂದಿರುವ 2017ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು 7 ರೈನ್‌ಬೋಸ್ ಸಂಸ್ಥೆಯ ಅಧ್ಯಕ್ಷ ಟಿ.ಶಿವರಾಂ ಆಗ್ರಹಿಸಿದರು.
ಇದಕ್ಕೆ ಪೂರಕವಾಗಿ ತಳಮಟ್ಟದಿಂದ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಮೂಲ ಸಮೀಕ್ಷೆ ನಡೆಸಬೇಕು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇವರ ಸಂಖ್ಯೆ ಎಷ್ಟಿದೆ ಎಂಬುದರ ಅಂಕಿ-ಅಂಶ ಪಡೆದು ಪುನಶ್ಚೇತನ ಕಾರ್ಯಕ್ರಮ ಜಾರಿಗೊಳಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಸಂಸ್ಥೆಯ ಪದಾಧಿಕಾರಿಗಳಾದ ರಮ್ಯಾ, ರಶ್ಮಿಕಾ, ಸುಚಿತ್ರಾ, ಸಂತೋಷ್ ಕುಮಾರ್ ಇದ್ದರು.