ಬೀರೂರು ಶೈಕ್ಷಣಿಕ ವಲಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ನಂದಿಬಟ್ಟಲು ಮುರಾರ್ಜಿ ದೇಸಾಯಿ ವಸತಿ ಶಾಲಾ ಶಿಕ್ಷಕರು ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದರು.  
ನ್ಯೂಸ್

ವಸತಿ ಶಾಲಾ ಶಿಕ್ಷಕರಿಗೆ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ

ಲಿಂಗದಹಳ್ಳಿ: ಬೀರೂರು ಶೈಕ್ಷಣಿಕ ವಲಯದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಶಿಕ್ಷಕರಿಗೆ ವಿವಿಧ ಕ್ರೀಡಾ ಸ್ಪರ್ಧೆ ನಡೆಸಲಾಯಿತು. ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿದ್ದ ನಂದಿಬಟ್ಟಲು ಮುರಾರ್ಜಿ ದೇಸಾಯಿ ವಸತಿ ಶಾಲಾ ಮುಖ್ಯ ಶಿಕ್ಷಕ ಬಸವರಾಜ ತಗ್ಗಿ ಅವರ ತಂಡ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ತಂಡದಲ್ಲಿ ನವೀನ್, ಮಲ್ಲಿಕಾರ್ಜುನ, ಸತೀಶ್. ಪ್ರದೀಪ್, ಅವಿನಾಶ್, ಸತೀಶ್, ಸುನೀಲ್, ಮಂಜು, ಪ್ರವೀಣ್ ನಾಯ್ಕ ಭಾಗವಹಿಸಿದ್ದರು. ಶಿಕ್ಷಕರ ಸಾಧನೆಗೆ ಮುರಾರ್ಜಿ ದೇಸಾಯಿ ವಸತಿ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.