ನ್ಯೂಸ್

ವಸತಿ ಶಾಲೆಗಳಲ್ಲಿ ಸ್ವಚ್ಛತೆ, ಗುಣಮಟ್ಟದ ದಿನಸಿ ಮತ್ತು ತರಕಾರಿಗಳನ್ನು ಬಳಸಲು ಅಪರ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಾಕೀತು.

ವಿಜಯವಾಣಿ ಸುದ್ದಿಜಾಲ ಕೋಲಾರ

ವಸತಿ ನಿಲಯಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅಕ್ಕಿ, ಎಣ್ಣೆ ಹಾಗೂ ತರಕಾರಿಗಳ ಗುಣಮಟ್ಟವನ್ನು ಪರಿಶೀಲಿಸಿ ಅಡುಗೆಗೆ ಬಳಸುವುದರಿಂದ ಉತ್ತವಾದ ಆರೋಗ್ಯವನ್ನು ಕಾಪಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಮಂಗಳಾರವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯ ಆಡಿಟೋರಿಯಂನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಸತಿ ನಿಲಯ ಮತ್ತು ವಸತಿ ಶಾಲೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಹಾರ ಸುರಕಷತೆ ಮತ್ತು ಗುಣಮಟ್ಟ ಹಾಗೂ ತಂಬಾಕು ನಿಯಂತ್ರಣ ಕಾಯ್ದೆಯ ಬಗ್ಗೆ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ವಸತಿ ನಿಲಯಗಳಲ್ಲಿನ ಅಡುಗೆ ಕೋಣೆಗಳ ಸ್ವಚ್ಛತೆ, ಪಾತ್ರಗಳ ಸ್ವಚ್ಛತೆ ಕಡೆಗೆ ಗಮನಹರಿಸಬೇಕು, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಡುಗೆಗೆ ಬಳಸಬೇಕು, ಅಡುಗೆ ಸಾಮಗ್ರಿಗಳನ್ನು ಸೂಕ್ತ ಸ್ಥಳಗಳಲ್ಲಿ ಶೇಖರಣೆ ಮಾಡಬೇಕು. ಸಲಕರಣೆಗಳನ್ನು ನಿರ್ದಿಷ್ಟ ಸಮಯಕ್ಕೆ ಸದುಪಯೋಗ ಪಡಿಸಿಕೊಂಡು ಅವುಗಳನ್ನು ಬಳಸಬೇಕು. ಅಡುಗೆ ಸಿಬ್ಬಂದಿಯವರು ಸ್ವಚ್ಛ ಉಡುಗೆ ತೊಡುಗೆಗಳನ್ನು ಧರಿಸಿಕೊಂಡು ಅಡುಗೆ ಮಾಡಬೇಕು ಎಂದರು. ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡಬೇಕು, ಯಾವುದೇ ಕಾರಣಕ್ಕೂ ಮಕ್ಕಳನ್ನು ಅಡುಗೆ ಮಾಡುವ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದರು.

ಶೌಚಾಲಯಗಳನ್ನು ಮತ್ತು ವಸತಿ ನಿಲಯಗಳ ಸುತ್ತ-ಮುತ್ತಲಿನ ವಾತಾವರಣ ಸ್ವಚ್ಛವಾಗಿ ಇಟ್ಟಿಕೊಳ್ಳಬೇಕು. ಈ ತರಬೇತಿ ಕಾರ್ಯಾಗಾರದಲ್ಲಿ ನಿಯಮಗಳು ಹಾಗೂ ಕಾಯ್ದೆಗಳ ಬಗ್ಗೆ ಸರಿಯಾಗಿ ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀನಿವಾಸನ್ ರವರು ಮಾತನಾಡಿ ಕರ್ನಾಟಕದಲ್ಲಿಯೇ ಪ್ರಪ್ರಥಮವಾಗಿ ವಸತಿ ಶಾಲೆಗಳನ್ನು ಹೊಂದಿರುವ ಮೂರು ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಹಾಸ್ಟಲ್‌ಗಳ ಯಾವುದೇ ಸಮಸ್ಯೆಗಳು ಇದ್ದಲ್ಲಿ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತಿಳಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕು. ತಮ್ಮ-ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಮೈಲಾರಪ್ಪ, ಉಪನ್ಯಾಸಕರಾದ ಮಹಮ್ಮದ್, ಜಿಲ್ಲಾ ಸುರಕ್ಷತಾ ಅಧಿಕಾರಿ ರಾಕೇಶ್ ಕುಮಾರ್, ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರು, ವಾರ್ಡನ್‌ಗಳು ಹಾಗೂ ಅಡುಗೆ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೨೨ ಕೆ.ಎಲ್.ಆರ್. ೦೭ : ವಸತಿ ನಿಲಯಗಳ ಸ್ವಚ್ಛತೆ ಮತ್ತು ನಿರ್ವಹಣೆ, ಸುರಕ್ಷತೆ, ಗುಣಮಟ್ಟ, ತಂಬಾಕು ನಿಯಂತ್ರಣ ಕುರಿತು ಕಾರ್ಯಾಗಾರ ಸಭೆಯನ್ನು ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಮಂಗಳ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.