ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು State Scholarship Portal ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆದ್ದರಿಂದ ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು State Scholarship Portal ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ.
SSP Homepage URL:https://ssp.postmatric.karnataka.gov.in/homepage.aspx Prematric Application URL: https://ssp.postmatric karnataka.gov.in/sspprc/
Postmatric Application URL: http://ssp.postmatric.karnataka.gov.in/post sa/signin.aspx
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ : 0821-2490111 ಹಾಗೂ ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ/ ಪುರಸಭೆ/ ನಗರಸಭೆ/ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ ನಗರ/ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.