ವಿಜಯವಾಣಿ ಸುದ್ದಿಜಾಲ ಕೋಲಾರ
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.೨೧ ರಿಂದ ಆರಂಭಗೊಳ್ಳುತ್ತಿದ್ದು, ಮಕ್ಕಳಲ್ಲಿನ ಗೊಂದಲ ನಿವಾರಣೆಗೆ ಮುಂದಾಗಿರುವ ಶಾಲಾ ಶಿಕ್ಷಣ ಇಲಾಖೆ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಕ್ಕಳು, ಪೋಷಕರಿಂದ ೫೦೦ಕ್ಕೂ ಹೆಚ್ಚು ಫೋನ್ ಕರೆಗಳು ಬಂದಿದ್ದು, ೮೯೬ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಉತ್ತರ ನೀಡಿದ್ದಾರೆ ಮತ್ತು ಪರೀಕ್ಷೆ ವಿದ್ಯಾರ್ಥಿ ಸ್ನೇಹಿಯಾಗಿ ಇರಲಿದೆ ಎಂದು ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.
ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿನ ಗೊಂದಲ ನಿವಾರಣೆಗಾಗಿ ನಡೆಸಲಾದ ಫೋನ್ ಇನ್ ಕಾರ್ಯಕ್ರಮದಲ್ಲಿ ಕೆಲವು ಮಕ್ಕಳ ಪ್ರಶ್ನೆಗಳಿಗೆ ಅವರೇ ಸ್ವತಃ ಉತ್ತರ ನೀಡಿ ಮಾತನಾಡಿ, ಮುಖ್ಯಶಿಕ್ಷಕರ ಸಭೆಗಳನ್ನು ನಡೆಸಿ ಪರೀಕ್ಷಾ ಸಿದ್ದತೆಗಳಿಗೆ ಮಾರ್ಗದರ್ಶನ ನೀಡಲಾಗಿದೆ. ಆದರೂ ಕೆಲವು ಮಕ್ಕಳಲ್ಲಿ ಇರಬಹುದಾದ ಗೊಂದಲ ನಿವಾರಣೆಗೆ ಫೋನ್ ಇನ್ ಕಾರ್ಯಕ್ರಮದ ಮೂಲಕ ಪ್ರಯತ್ನಿಸಲಾಗಿದೆ ಎಂದರು.
ಪ್ರಶ್ನೆ ಕೇಳಿದ ವಿದ್ಯಾರ್ಥಿಗಳು ಪರೀಕ್ಷಾ ಸಿದ್ದತೆ, ಪರೀಕ್ಷಾ ವಿಧಾನ, ಪ್ರಶ್ನೆಪತ್ರಿಕೆ ಮಾದರಿ, ಸಿಸಿ ಕ್ಯಾಮರಾ ಅಳವಡಿಕೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಕೇಂದ್ರದಲ್ಲಿ ನಕಲು ತಡೆಯಲು ಇರುವ ಅಧಿಕಾರಿ, ಸಿಬ್ಬಂದಿಯಿAದ ಒತ್ತಡ ಎದುರಾಗುವುದು ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.
ನಕಲು ತಡೆಗೆ ಕ್ರಮ ಮುಜುಗರ ಇಲ್ಲ :
ಡಿಡಿಪಿಐ ಅವರು ಕೆಲವುಮಕ್ಕಳಿಗೆ ಉತ್ತರ ನೀಡಿ, ಕೇಂದ್ರದಲ್ಲಿ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್ ಇದೆ, ಜತೆಗೆ ನಕಲು ತಡೆಗೆ ಕ್ರಮವಹಿಸಿರುವುದು ನಿಜವಾದರೂ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ಮುಜುಗರವಾಗದಂತೆ ಕ್ರಮವಹಿಸಲಾಗಿದೆ, ಮಕ್ಕಳನ್ನು ಅನಗತ್ಯವಾಗಿ ತಪಾಸಣೆಗೆ ಒಳಪಡಿಸಿ ಆತಂಕ ಸೃಷ್ಟಿಸುವ ಕೆಲಸ ಮಾಡುವುದಿಲ್ಲ, ಪರೀಕ್ಷೆಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸುವುದಾಗಿ ತಿಳಿಸಿದರು.
ಮಕ್ಕಳು ಉತ್ತಮ ಅಂಕ ಗಳಿಸಲು ಸಹಕಾರಿಯಾಗುವಂತೆ ಈಗಾಗಲೇ ಇಲಾಖೆ ಅನೇಕ ಸಂಪನ್ಮೂಲ ಪುಸ್ತಕಗಳನ್ನು ಒದಗಿಸಿದೆ, ಅದನ್ನು ಚೆನ್ನಾಗಿ ಅಭ್ಯಾಸ ಮಾಡುವಂತೆ ತಿಳಿಸಲಾಗಿದೆ ಎಂದ ಅವರು, ಕೆಲವು ಮಕ್ಕಳ ಶೇ.೧೦೦ ಸಾಧನೆಗೆ ಏನು ಮಾಡಬೇಕು ಎಂದು ಕೇಳಿದರು ಎಂದರು.
ಶೇ.೧೦೦ ಸಾಧನೆಗೆ ಶಿಕ್ಷಕರು ಹೇಳುವ ಪಾಠದ ಜತೆಗೆ ಪಠ್ಯಪುಸ್ತಕ ಓದುವ ಅಭ್ಯಾಸ ಮಾಡಿ ಅದರಿಂದ ಅನ್ವಯಿಕ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರಿಸಬಹುದಾಗಿದ್ದು, ಆಗ ಶೇ.೧೦೦ ಸಾಧನೆ ಮಾಡಬಹುದು ಎಂದು ತಿಳಿಸಿದರು.
ವಿಜ್ಞಾನ ವಿಷಯದ್ದೇ ಅತಿ ಹೆಚ್ಚು ಪ್ರಶ್ನೆ :
ಪರೀಕ್ಷಾ ನೋಡಲ್ ಅಧಿಕಾರಿ ಸಗೀರಾ ಅಂಜುA, ಫೋನ್ ಇನ್ ಕಾರ್ಯಕ್ರಮದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳ ಕುರಿತು ಮಾಹಿತಿ ನೀಡಿ, ಪರೀಕ್ಷಾ ವಿಧಾನಕ್ಕೆ ಸಂಬAಧಿಸಿದAತೆ ೫೪ ಹೆಚ್ಚು ಪ್ರಶ್ನೆಗಳು ಮಕ್ಕಳಿಂದ ಬಂತು ಆದರೆ ವಿಜ್ಞಾನ ವಿಷಯಕ್ಕೆ ಸಂಬAಧಿಸಿದAತೆ ೧೮೦ ಪ್ರಶ್ನೆಗಳನ್ನು ಮಕ್ಕಳು ಕೇಳಿದ್ದು ವಿಶೇಷವಾಗಿದೆ ಎಂದರು.
ಉಳಿದAತೆ ಕನ್ನಡ ವಿಷಯಕ್ಕೆ ಸಂಬAಧಿಸಿದAತೆ ೧೧೦ ಪ್ರಶ್ನೆ, ಇಂಗ್ಲೀಷ್ ವಿಷಯಕ್ಕೆ ೧೭೮ ಪ್ರಶ್ನೆ, ಹಿಂದಿಗೆ ೭೯ ಪ್ರಶ್ನೆ, ಗಣಿತ ವಿಷಯಕ್ಕೆ ಸಂಬAಧಿಸಿದಮತೆ ೧೩೦, ವಿಜ್ಞಾನ ವಿಷಯಕ್ಕೆ ೧೮೦ ಪ್ರಶ್ನೆ ಹಾಗೂ ಸಮಾಜವಿಜ್ಞಾನ ವಿಷಯಕ್ಕೆ ಸಂಬAಧಿಸಿದAತೆ ೧೪೦ ಹಾಗೂ ಪ್ರಥಮ ಭಾಷೆ ಉರ್ದು ವಿಷಯಕ್ಕೆ ೨೫ ಪ್ರಶ್ನೆಗಳನ್ನು ಮಕ್ಕಳು ಕೇಳಿದರು ಎಂದು ವಿವರಿಸಿದರು.
ಕನ್ನಡ, ಇಂಗ್ಲೀಷ್, ಹಿಂದಿಯಲ್ಲಿ ಮಕ್ಕಳು ವ್ಯಾಕರಣದ ಕುರಿತು ಹೆಚ್ಚು ಪ್ರಶ್ನೆ ಕೇಳಿದರೆ, ಗಣಿತದಲ್ಲಿ ೪ ಅಂಕಗಳ ಪ್ರಶ್ನೆ,ಗ್ರಾಪ್ ಲೆಕ್ಕಗಳ ಕುರಿತು ಪ್ರಶ್ನೆ ಕೇಳಿದರು.
ಫೋನ್ ಇನ್ ಕಾರ್ಯಕ್ರಮದಲ್ಲಿ ಶಿಕ್ಷಣಾಧಿಕಾರಿ ವೀಣಾ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ, ಸಂಪನ್ಮೂಲ ಶಿಕ್ಷಕರಾದ ಬಿ.ಕೆ.ನಾಗರಾಜ್, ವೇಣುಗೋಪಾಲ್, ರಾಜಣ್ಣ, ಬಿ.ಎ.ಕವಿತಾ, ರಮಾ, ಕೃಷ್ಣಮೂರ್ತಿ, ಪ್ರಭಾ, ಎಸ್.ಭಾಗ್ಯ, ಬಸವರಾಜ್, ಶ್ರೀನಿವಾಸಗೌಡ, ನರಸಿಂಹಪ್ರಸಾದ್, ಅಮರೇಶಬಾಬು,ಗಂಗಾಧರಮೂರ್ತಿ, ರಾಜರೆಡ್ಡಿ, ವಜಿಹ್ ಸುಲ್ತಾನಾ, ಫರೀದಾ ಬೇಗಂ ಮತ್ತಿತರರು ಹಾಜರಿದ್ದು, ಮಕ್ಕಳ ದೂರವಾಣಿ ಕರೆ ಸ್ವೀಕರಿಸಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿ ಗೊಂದಲ ಪರಿಹರಿಸಿದರು.
ಚಿತ್ರ ೧೩ ಕೆ.ಎಲ್.ಆರ್. ೦೨ : ಕೋಲಾರದ ಡಿಡಿಪಿಐ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗಿನ ಫೋನ್-ಇನ್ ಕಾರ್ಯಕ್ರಮದಲ್ಲಿ ಡಿಡಿಪಿಐ ಕೃಷ್ಣಮೂರ್ತಿ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಸಗೀರಾ ಅಂಜುA, ಶಿಕ್ಷಣಾಧಿಕಾರಿ ವೀಣಾ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ ಸೇರಿದಂತೆ ವಿಷಯ ಪರಿವೀಕ್ಷಕರು, ಸಂಪನ್ಮೂಲ ಶಿಕ್ಷಕರು ಹಾಜರಿದ್ದು, ಮಕ್ಕಳ ಗೊಂದಲ ನಿವಾರಿಸಿದರು.