ನ್ಯೂಸ್

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಎನ್‌ಎಸ್‌ಎಸ್ ಪೂರಕ / ಎಂಎಲ್‌ಸಿ ಎಂಎಲ್ ಅನಿಲ್‌ಕುಮಾರ್

ವಿಜಯವಾಣಿ ಸುದ್ದಿಜಾಲ ಕೋಲಾರ

ವಿದ್ಯಾರ್ಥಿಗಳ ಜೀವನದ ಸರ್ವತೋಮುಖ ಅಭಿವೃದ್ಧಿಗೆ ಎನ್‌ಎಸ್‌ಎಸ್ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿನಿಯರು ಗಾಂಧೀಜಿ ಮತ್ತು ಅಂಬೇಡ್ಕ್ರ್ ರವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎನ್‌ಎಸ್‌ಎಸ್ ಸ್ವಚ್ಛತೆ, ಸೌರ್ಹದತೆಗೆ ಮತ್ತು ರಾಷ್ಟಿçÃಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಲಿದೆ ಎಂದು ವಿಧಾನಪರಿಷತ್ತು ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ತಾಲ್ಲೂಕಿನ ನಾಯಕರಹಳ್ಳಿ ಗ್ರಾಮದಲ್ಲಿ ಏ.೩ ರಿಂದ ಏ.೯ರ ತನಕ ಹಮ್ಮಿಕೊಂಡಿರುವ ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ಶಿಬಿರಗಳನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿನಿಯರು ಇಂತಹ ಶಿಬಿರಗಳಲ್ಲಿ ಹೆಚ್ಚಾಗಿ ಭಾಗವಹಿಸುವಂತಾಗಬೇಕು. ಇಲ್ಲಿ ಸ್ವಚ್ಛತೆ ಮತ್ತು ಸೌರ್ಹಾದತೆಗೆ ಆದ್ಯತೆ ನೀಡಿದಂತೆ ತಮ್ಮ ಗ್ರಾಮಗಳಲ್ಲಿಯೂ ಆದ್ಯತೆ ನೀಡಬೇಕು ಎಂದರು.

ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳನ್ನು ಶಾಲಾ ಕಾಲೇಜಿನವರು ಹೆಚ್ಚಾಗಿ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿನ ಅಸಮಾನತೆಯನ್ನು ಹೋಗಲಾಡಿಸಬೇಕು. ಭೇದಭಾವವಿಲ್ಲದೆ ಎಲ್ಲರೂ ಒಟ್ಟಿಗೆ ಸೇರುವಂತಹ ಅವಕಾಶಗಳು ಇಂತಹ ಶಿಬಿರಗಳಿಂದ ಮಾತ್ರ ಸಾಧ್ಯ. ಓದಿನ ಜೊತೆಗೆ ಇಂತಹ ಚಟುವಟಿಕೆಗಳು ಮುಖ್ಯ ಎಂದರು.

ಬೆಂಗಳೂರು ಉತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಅರ್ಬಾಜ್ ಪಾಷಾ ಮಾತನಾಡಿ, ವಿದ್ಯಾರ್ಥಿನಿಯರು ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ಗ್ರಾಮದಲ್ಲಿ ಸ್ವಚ್ಛತಾ ಸೇವೆ ಜೊತೆಗೆ ವೈಯಕ್ತಿಕ ಬೆಳವಣಿಗೆ ಮತ್ತು ಕಾಲೇಜಿನ ಶ್ರೇಯಸ್ಸಿಗೆ ಪೂರಕವಾಗಿ ಬೆಳೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ ಈ ಗಂಗಾಧರ್ ರಾವ್ ವಹಿಸಿದ್ದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಎಂ ಗೋಪಾಲಗೌಡ, ಸುರೇಶ್ ಮತ್ತು ಅಕ್ಮಲ್ ಸಾಬೀ, ಗ್ರಾಮ ಪಂಚಾಯತ್ ಸದಸ್ಯ ನಂಜಪ್ಪ, ನಾರಾಯಣಸ್ವಾಮಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮಣ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಈರಪ್ಪ ಮತ್ತು ಗ್ರಾಮದ ಮುಖಂಡರು ಹಾಗೂ ಹಿರಿಯರು ಉಪಸ್ಥಿತರಿದ್ದರು.

ಕಾಲೇಜಿನ ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ಪ್ರೊ. ಕೆ.ಎನ್.ಶ್ರೀನಿವಾಸ್ ಗೌಡ, ಅನುಷಾ ಉಡುಪ ಮತ್ತು ವಿ.ಆರ್.ನಿಖಿಲ್ ರವರೊಂದಿಗೆ ಕಾಲೇಜಿನ ಇತರೆ ಬೋಧಕ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಚಿತ್ರ ೦೩ ಕೆ.ಎಲ್.ಆರ್. ೦೩ : ಕೋಲಾರ ತಾಲ್ಲೂಕು ನಾಯಕರಹಳ್ಳಿ ಗ್ರಾಮದಲ್ಲಿ ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಎಂಎಲ್.ಸಿ ಅನಿಲ್‌ಕುಮಾರ್, ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಗೋಪಾಲಗೌಡ, ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಈ.ಗಂಗಾಧರ್‌ರಾವ್ ಮುಂತಾದವರು ಇದ್ದರು.