ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳಿಗೆ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗಿರುವ ಅರ್ಹ ಪರಿಶಿಷ್ಟ ಜಾತಿ/ವರ್ಗದ ಪ್ರವೇಶಾತಿ ಪಡೆದಿರುವ/ಪಡೆಯುವ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶ (SSP)ದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಗೆ ಒಳಪಡುವ ವಿದ್ಯಾರ್ಥಿಗಳು 2024-25 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಸ್ನಾತಕ (ಪ್ರಥಮ, ದ್ವಿತೀಯ ಮತ್ತು ಅಂತಿಮ), ಸ್ನಾತಕೋತ್ತರ (ಪ್ರಥಮ, ಅಂತಿಮ) ಕೋ-ಪ್ರವೇಶಾತಿ ಪಡೆದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶ (SSP)ದಲ್ಲಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಆ ತಾಲ್ಲೂಕು/ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಕಛೇರಿ ಅಥವಾ ಹತ್ತಿರವಿರುವ “ಗ್ರಾಹ ಕೇಂದ್ರ ಇಲ್ಲಿಗೆ, SSP ಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿರುವ ಸ್ವೀಕೃತಿ (Acknowledgement) ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದಿಂದ 60% ಪಾವತಿಯಾಗುವ ವಿದ್ಯಾರ್ಥಿವೇತನಕ್ಕೆ ಬಯೋಮೆಟ್ರಿಕ್ ಇ- ದೃಢೀಕರಣ(E-kyc) ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇಲ್ಲವಾದಲ್ಲಿ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆಯುವ ಸದರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗೆ ಅರ್ಹರಾಗುವುದಿಲ್ಲ.
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು 2025-26 ನೇ ಶೈಕ್ಷಣಿಕ ಸಾಲಿನಲ್ಲಿ ವಿಶ್ವ ವಿದ್ಯಾನಿಲಯದಲ್ಲಿ ಸ್ನಾತಕ (ಪ್ರಥಮ, ದ್ವಿತೀಯ ಮತ್ತು ಅಂತಿಮ) ಸ್ನಾತಕೋತ್ತರ (ಪ್ರಥಮ, ದ್ವಿತೀಯ ) ಕೋರ್ಸ್ಗಳಿಗೆ ಪ್ರವೇಶಾತಿ ಪಡೆದಿರುವ ಪರಿಶಿಷ್ಟವರ್ಗದ ವಿದ್ಯಾಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶ (SSP) ದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ((NSP) One-Time Registration Number (OTR)ನ್ನು Website: https://scholarshiop.gov.in/ ನಲ್ಲಿ ಸೃಜಿಸಿ (Create) ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬoಧಿಸಿದ ಇಲಾಖೆಯನ್ನು ಖುದ್ದಾಗಿ ಭೇಟಿ ನೀಡುವ ಮೂಲಕ ಅಥವಾ ತಾಲ್ಲೂಕು ಸಮಾಜಕಲ್ಯಾಣ ಇಲಾಖೆ ಕಛೇರಿ, ಪಡುವಾರಹಳ್ಳಿ, ಮೈಸೂರು. ದೂರವಾಣಿ ಸಂಖ್ಯೆ: 0821-2520910 ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಪಡುವಾರಹಳ್ಳಿ, ಮೈಸೂರು. ದೂರವಾಣಿ ಸಂಖ್ಯೆ 0821-2427140 ನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ/ವರ್ಗ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿವೇತನ ಘಟಕದ ಸಂಯೋಜನಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.