ನ್ಯೂಸ್

ವಿಪತ್ತು ನಿರ್ವಹಣೆ ಕಲ್ಪಿತ ಪ್ರದರ್ಶನ

ಚಿತ್ರದುರ್ಗ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯಿಂದ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಸೋಮವಾರದಿಂದ ಎರಡು ದಿನಗಳ ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣಾ ತರಬೇತಿ ಕಾರ್ಯಾಗಾರ ಆಯೋಜಿಸಿತ್ತು. ರೆಡ್‌ಕ್ರಾಸ್ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಸ್ವಯಂಸೇವಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು. ರಾಷ್ಟ್ರಮಟ್ಟದ ತರಬೇತುದಾರ ಡಾ.ವಿ.ಎಲ್.ಎಸ್. ಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಅಗಡಿ, ಪ್ರಾಂಶುಪಾಲ ಸಿದ್ದರಾಮ ಚೆನ್ನಗೊಂಡ, ರೆಡ್‌ಕ್ರಾಸ್ ರಾಜ್ಯ ಆಡಳಿತ ಮಂಡಳಿ ಸದಸ್ಯ ಅನಂತ ರೆಡ್ಡಿ, ಕಾರ್ಯದರ್ಶಿ ಮಜಹರ್ ಉಲ್ಲಾ, ಖಜಾಂಚಿ ವೀರೇಶ್, ನಿರ್ದೇಶಕರಾದ ಗುರುಮೂರ್ತಿ, ಶಿವರಾಮ್, ಯುವ ರೆಡ್‌ಕ್ರಾಸ್ ಸಂಯೋಜಕ ಕೃಷ್ಣಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಇದ್ದರು.