ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.inಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಸೇವಾಸಿಂಧು ತಂತ್ರಾoಶದ ಮುಖಾಂತರ ಅರ್ಜಿಸಲ್ಲಿಸಲು ಜೂನ್ 30 ಕೊನೆಯ ದಿನಾಂಕ ನಿಗಧಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.gov.inಮೂಲಕ ಅಥವಾ ನಿಗಮದ ದೂ.ಸಂ:080-22374832 ಮತ್ತು 8050770004, 8050770005 ಹಾಗೂ ಮೈಸೂರು ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 0821-2341194 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹೆಚ್.ಎ.ಶೋಭ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.