ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮೈಸೂರು ಜಿಲ್ಲೆ, ಮೈಸೂರು ಇವರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಯಮಗಳಿಂದ ಪ್ರತಿವರ್ಷ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಅರ್ಜಿಗಳನ್ನು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ/ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿ ಸಭೆಯಲ್ಲಿ ನಿಗಧಿ ಪಡಿಸಿದ ಗುರಿಯನ್ವಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆದರೆ ಕೆಲವು ಮಧ್ಯವರ್ತಿಗಳ ನಿಗಮದಿಂದ ಸಾಲ ಸೌಲಭ್ಯವನ್ನು ಕೊಡಿಸುತ್ತೇವೆಂದು ಜನರಿಂದ ಹಣವನ್ನು ವಸೂಲಿ ಮಾಡುತ್ತಿರುವುದಾಗಿ ಸಾರ್ವಜನಿಕರು ಗಮನಕ್ಕೆ ತಂದಿರುವುದರಿoದ ಈ ರೀತಿಯ ಮಧ್ಯವರ್ತಿಗಳ ಮಾತನ್ನು ನಂಬಿ ಹಣ ನೀಡಿ ಮೋಸ ಹೋಗಬಾರದೆಂದು ಈ ಮೂಲಕ ತಿಳಿಸಲಾಗುತ್ತಿದ್ದು, ಒಂದು ವೇಳೆ ಹಣ ನೀಡಿ ಮೋಸ ಹೋದಲ್ಲಿ ನಿಗಮವು ಜವಬ್ದಾರಿಯಾಗುವುದಿಲ್ಲ ಇಂತಹ ಮಧ್ಯವರ್ತಿಗಳು ತಮ್ಮನ್ನು ಭೇಟಿ ಮಾಡಲು ಬಂದಾಗ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆಯಲ್ಲಿ ದೂರನ್ನು ನೀಡಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹೆಚ್.ಎ.ಶೋಭ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.