ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಮುಡಾ ವಿಶೇಷ ತಹಸೀಲ್ದಾರ್ ರಾಜಶೇಖರ್ ಸೇರಿದಂತೆ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಇಡಿ ನೋಟಿಸ್ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನಲ್ಲಿನ ಇಡಿ ಕಚೇರಿಗೆ ತೆರಳಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿ ಶ್ರುತಿ, ಹಿಂದಿನ ಆಯುಕ್ತರ ಆಪ್ತ ಕಾರ್ಯದರ್ಶಿ ಪ್ರಶಾಂತ್, ಬೆರಳಚ್ಚುಗಾರ ಚಂದ್ರು ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಎರಡು ಗಂಟೆಗೂ ಹೆಚ್ಚು ಕಾಲ ಪ್ರತಿ ಅಧಿಕಾರಿ ಮತ್ತು ಸಿಬ್ಬಂದಿಯ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು, ಜತೆಗೆ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡರು.
ಇಂಜಿನಿಯರ್‌ಗಳಾದ ಆರ್.ಶ್ರೀನಿವಾಸ್, ರಾಜಶೇಖರ್, ರೆಕಾರ್ಡ್ ರೂಂನ ಸಿಬ್ಬಂದಿ ರವಿ ಸೇರಿದಂತೆ ಉಳಿದ ನಾಲ್ಕು ಜನರಿಗೆ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದ್ದು, ಸೋಮವಾರ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.