ನ್ಯೂಸ್

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪ್ರತಿ ವರ್ಷ ಜೂನ್ 5 ರಂದು ವಿಶ್ವಾದಾದ್ಯಂತ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ವರ್ಷವು ಸಹ ಸದರಿ ಕಾರ್ಯಕ್ರಮವನ್ನು ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಈ ವಿಷಯವಾಗಿ ಮಕ್ಕಳಲ್ಲಿ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ಮೈಸೂರು ನಗರ ಮತ್ತು ಗ್ರಾಮಾಂತರದ ವತಿಯಿಂದ ಜಿಲ್ಲಾಡಳಿತ ಹಾಗೂ ಮಡಿಲು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ರಿ), ಮೈಸೂರು ಇವರುಗಳ ಸಹಯೋಗದೊಂದಿಗೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ವಿನೋಜಭಾ ರಸ್ತೆಯ ಕಲಾಮಂದಿರ ಆವರಣದಲ್ಲಿ ಏರ್ಪಡಿಸಲಾಗಿದೆ.

ಜೂನ್ 03 ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಚಿತ್ರಕಲಾ ಸ್ಫರ್ಧೆಯನ್ನು ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ವಿಷಯದಲ್ಲಿ 1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ, 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತದೆ. ಮಂಡಳಿಯಿoದ ಡ್ರಾಯಿಂಗ್ ಶೀಟ್ ಒದಗಿಸಲಾಗುತ್ತದೆ. ಬಣ್ಣ ಹಾಗೂ ಇತರೆ ಅಗತ್ಯ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳು ತರಬೇಕು, ಒಂದು ಶಾಲೆಯಿಂದ ಗರಿಷ್ಠ 10 ವಿದ್ಯಾರ್ಥಿಗಳು ಒಂದೊoದು ವಿಷಯದಲ್ಲಿ ಭಾಗವಹಿಸಬಹುದಾಗಿದೆ. ಹಾಗೂ ಪ್ರಬಂಧ ಸ್ಪರ್ಧೆಯನ್ನು ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ವಿಷಯದಲ್ಲಿ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುವುದರಿಂದ ಮಂಡಳಿಯಿoದ ಹಾಳೆಯನ್ನು ಒದಗಿಸಲಾಗುವುದು, ಒಂದು ಶಾಲೆಯಿಂದ ಗರಿಷ್ಠ 05 ವಿದ್ಯಾಥಿಗಳು ಭಾಗವಹಿಸಬಹುದಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜೂನ್ 5 ರಂದು ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ)ಯ ಶ್ರೀನಿವಾಸ್ ಅವರ ದೂ.ಸಂ:7019033602, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಥಮ ದರ್ಜೆ ಸಹಾಯಕರಾದ ಪವನ್.ಬಿ ಅವರ ದೂ.ಸಂ:9108149365ನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ನಗರದ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.